ಕರ್ನಾಟಕ

ಕಬಿನಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಣಿಕಂಠನ್ ಕಾಡಾನೆ ದಾಳಿಗೆ ಬಲಿ

Pinterest LinkedIn Tumblr


ಮೈಸೂರು: ಎಚ್.ಡಿ. ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಪರಿಶೀಲನೆ ವೇಳೆ ಶನಿವಾರ ಮಧ್ಯಾಹ್ನ ಕಾಡಾನೆ ದಾಳಿ ನಡೆಸಿ ಕಬಿನಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಮಣಿಕಂಠನ್ (45) ಮೃತಪಟ್ಟಿದ್ದಾರೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 2.30 ಗಂಟೆಗೆ ದುರ್ಘಟನೆ ಸಂಭವಿಸಿದೆ. ಮಣಿಕಂಠನ್‌ ಅವರು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕರಾಗಿದ್ದರು.
ಸಿಸಿಎಫ್ ಮಣಿಕಂಠನ್

ಕಾಡ್ಗಿಚ್ಚು ನಿಯಂತ್ರಿಸಲು ಫೈರ್‌ಲೈನ್‌ಗಾಗಿ ಸರ್ವೆ ನಡೆಸುತ್ತಿದ್ದಾಗ ಏಕಾಏಕಿಯಾಗಿ ಆನೆ ದಾಳಿ ನಡೆಸಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜೆಡಿಎಸ್ ಸಮಾವೇಶದಲ್ಲಿ ಸಂತಾಪ

ಮಂಡ್ಯದಲ್ಲಿ ಶನಿವಾರ ಮಧ್ಯಾಹ್ನ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಹಾಗೂ ಆನೆ ತುಳಿತಕ್ಕೊಳಗಾಗಿ ಮೃತಪಟ್ಟ ಅರಣ್ಯ ಇಲಾಖೆ ಅಧಿಕಾರಿ ಮಣಿಕಂಟ ಅವರಿಗೆ ಸಂತಾಪ ಸೂಚಿಸಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

Comments are closed.