ಕರ್ನಾಟಕ

ಕೆಪಿಜೆಪಿಗೆ ಉಪೇಂದ್ರ ಗುಡ್ ಬೈ ! ಹೊಸ ಪಕ್ಷ ಸ್ಥಾಪನೆಗೆ ನಿರ್ಧಾರ….

Pinterest LinkedIn Tumblr

ಬೆಂಗಳೂರು: ಕೆಪಿಜೆಪಿ ಪಕ್ಷಕ್ಕೆ ನಟ ಉಪೇಂದ್ರ ರಾಜೀನಾಮೆ ನೀಡಿದ್ದಾರೆ. ಇಂದು ನಗರದ ರುಪ್ಪೀಸ್ ರೆಸಾರ್ಟ್‍ನಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನಮಗೂ ಕೆಪಿಜೆಪಿಗೂ ಇನ್ಮುಂದೆ ಸಂಬಂಧ ಇರಲ್ಲ. ಪ್ರಜಾಕೀಯ ಹೆಸರಲ್ಲಿ ಹೊಸ ಪಕ್ಷ ಕಟ್ಟಲು ತೀರ್ಮಾನ ಮಾಡಿರುವುದಾಗಿ ತಿಳಿಸಿದರು. ಇಂದಿನಿಂದಲೇ ಹೊಸ ಪಕ್ಷ ಸ್ಥಾಪನೆ ಕಾರ್ಯ ಆರಂಭಿಸುತ್ತೇವೆ ಎಂದು ಹೇಳಿದ್ರು.

ಕೆಪಿಜೆಪಿಗೆ ನಾವೆಲ್ಲರೂ ರಾಜೀನಾಮೆ ನೀಡುತ್ತೇವೆ. ಪ್ರಜಾಕೀಯದ ಸಿದ್ಧಾಂತ ಇಟ್ಟುಕೊಂಡೇ ಹೊಸ ಪಕ್ಷ ಕಟ್ಟುತ್ತೇವೆ. ಆರೋಗ್ಯ, ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುತ್ತೇವೆ. ಎಲ್ಲರೂ ಸೇರಿ ಒಮ್ಮತದ ತಿರ್ಮಾನಕ್ಕೆ ಬಂದ್ದಿದ್ದೇವೆ. ನಾನು ಹಾಗೂ ನನ್ನ ಜೊತೆ ನಾಲ್ಕೈದು ಜನ ಸೇರಿ ಎಲ್ಲರೂ ರಾಜಿನಾಮೆ ನೀಡುತ್ತಿದ್ದೇವೆ ಎಂದು ಹೇಳಿದ್ರು.

ಪ್ರಜಾಕೀಯ ವಿಷಯವನ್ನು ಜನರಿಗೆ ತಿಳಿಸುತ್ತೇವೆ. ಅದಷ್ಟು ಬೇಗ ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡುತ್ತೇವೆ. ಇದೇ ವಿಧಾನಸಭೆ ಚುನಾವಣೆಗೆ ಸ್ಫರ್ಧೆ ಮಾಡುತ್ತೇವೆ. ಇಲ್ಲವಾದ್ರೆ ಪಾಲಿಕೆ ಚುನಾವಣೆ ಅಥವಾ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಪ್ರಜಾಕೀಯ ಬಿಟ್ಟು ರಾಜಕೀಯ ಮಾಡಲ್ಲ. ಪಕ್ಷ ಸ್ಥಾಪನೆ ಬಗ್ಗೆ ವಕೀಲರೊಂದಿಗೆ ಮಾತನಾಡುತ್ತೇವೆ ಎಂದು ತಿಳಿಸಿದ್ರು.

ನಮಗೆ ಅಭ್ಯರ್ಥಿಗಳು ರೆಡಿ ಇದ್ದಾರೆ. ಈಗ ಪಕ್ಷ ಒಂದೇ ನಮಗೆ ಬೇಕು. ಇಂತಹ ಕಷ್ಟ ಗಳು ಸಾಕಷ್ಟು ಬರುತ್ತವೆ. ಇಂತಹ ಕಷ್ಟಗಳಿಂದ ಇನ್ನಷ್ಟು ಬಲಗೊಳ್ಳುತ್ತೇವೆ ಎಂದು ಹೇಳಿದ್ರು. ಮಹೇಶ್ ಗೌಡ ಮನವೊಲಿಸುವ ಕೆಲಸ ಮಾಡಿದೆವು, ಅದ್ರೆ ಅದು ಸಾಧ್ಯವಾಗಿಲ್ಲ. ಅವರಿಗೆ ಪಬ್ಲಿಸಿಟಿ ಅವಶ್ಯಕತೆ ಇದೆ. ಪ್ರಜಾಕೀಯ ವಿಷಯವನ್ನು ಕೊಲೆ ಮಾಡಲು ಹೋಗಿದ್ರು. ಅವರಿಗೆ ಪ್ರಜಾಕೀಯದ ಪರಿಕಲ್ಪನೆಯೇ ಅರ್ಥವಾಗಿಲ್ಲ ಎಂದು ಉಪೇಂದ್ರ ಹೇಳಿದ್ರು.

Comments are closed.