ಕರ್ನಾಟಕ

ಮೊಹಮ್ಮದ್‌ ನಲಪಾಡ್‌ಗೆ ಮಾರ್ಚ್‌ 21ರವರೆಗೆ ಜೈಲು ಖಚಿತ

Pinterest LinkedIn Tumblr


ಬೆಂಗಳೂರು: ವಿದ್ವತ್‌ ಮೇಲಿನ ಹಲ್ಲೆ ಪ್ರಕರಣದ ಆರೋಪಿ , ಶಾಸಕ ಎನ್‌.ಎ.ಹ್ಯಾರೀಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ಮಾರ್ಚ್‌ 21ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್‌ ಆದೇಶ ನೀಡಿದೆ.

ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯವು ಈ ಆದೇಶ ಪ್ರಕಟಿಸಿದೆ. ನಗರದ 63ನೇ ಸೆಷನ್ಸ್‌ ನ್ಯಾಯಾಲಯ ಮಾ.2ರಂದು ಜಾಮೀನು ಅರ್ಜಿ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಎಸ್‌.ಹರೀಶ್‌ ಕುಮಾರ್‌ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.

ಶಾಂತಿನಗರ ಶಾಸಕ ಹ್ಯಾರಿಸ್ ಅವರ ಪುತ್ರ ನಲಪಾಡ್‌ ಯುಬಿ ಸಿಟಿಯಲ್ಲಿ ವಿದ್ವತ್‌ ಎಂಬವರ ಮೇಲೆ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ ಗಾಯಗೊಂಡು ಮಲ್ಯ ಆಸ್ಪತ್ರೆ ಸೇರಿದ್ದ ವಿದ್ವತ್‌ ಬಳಿ ಹೋಗಿ ಅವರಿಗೆ ಮತ್ತು ಸೋದರನಿಗೆ ಬೆದರಿಕೆಯೊಡ್ಡಿ ಪರಾರಿಯಾಗಿದ್ದರು. ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

Comments are closed.