ಕರ್ನಾಟಕ

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಆಸ್ಪತ್ರೆಗೆ ದಾಖಲು

Pinterest LinkedIn Tumblr


ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೊರೆಸ್ವಾಮಿ ಅವರಿಗೆ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ ಏಪ್ರಿಲ್‌ ಹತ್ತರಂದು ದೊರೆಸ್ವಾಮಿ ಅವರು ನೂರನೇ ವರ್ಷಕ್ಕೆ ಕಾಲಿಟ್ಟಿದ್ದರು. ಇವರು ಬಾಲ್ಯದಿಂದಲೇ ಮಹಾತ್ಮ ಗಾಂಧಿ ಅವರಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡವರು.

Comments are closed.