
ದಾವಣಗೆರೆ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 50ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಮಂಡಲದಲ್ಲಿ ರೈತರ ಧ್ವನಿಯಾಗಿ ರೈತ ಪ್ರತಿನಿಧಿಗಳು ಇರಬೇಕಾದುದು ಎಷ್ಟು ಮುಖ್ಯವೆಂಬುದು ಅರಿವಾಗಿದ್ದು, ಈ ಹಿನ್ನಲೆಯಲ್ಲಿ ಯಾವುದೇ ರಾಜಕೀಯ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೇ, ರೈತ ಸಂಘ, ಹಸಿರು ಸೇನೆ ತನ್ನ ಸ್ವಂತ ಬಲದಿಂದಲೇ 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದರು.
ರಾಜ್ಯದ ನಾನಾ ಕ್ಷೇತ್ರಗಳಲ್ಲಿ ರೈತ ಪ್ರತಿನಿಧಿಗಳು ಸ್ಪರ್ಧಿಸುವ ಬಗ್ಗೆ ರಾಜ್ಯ ಸಮಿತಿ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಿದ್ದೇವೆ ಎಂದರು. ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನೇತೃತ್ವದಲ್ಲಿ ಮಾ.23ರಂದು ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ದಾವಣಗೆರೆ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳುವ ಬಗ್ಗೆ ಚರ್ಚಿಸಲಾಗಿದ್ದು, ರೈತ ಸಂಘ-ಹಸಿರು ಸೇನೆ ರೈತರೊಂದಿಗೆ ಸದಾ ಇರುತ್ತದೆ ಎಂದು ಭರವಸೆ ನೀಡಿದರು.
Comments are closed.