
ಧಾರವಾಡ : ಕಟ್ಟಿಕೊಂಡ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಗೀತಾ ಮಾಟರ (41) ಎಂದು ಗುರುತಿಸಲಾಗಿದ್ದು, ರಕ್ತದ ಮಡುವಿನಲ್ಲಿ ಒದ್ದಾಡಿ ಪತ್ನಿ ಪ್ರಾಣ ಬಿಟ್ಟಿದ್ದಾಳೆ. ಆಕೆಯ ಪತಿ ಬಸವರಾಜ ಮಾಟರ ಚಾಕುವಿನಿಂದ ಇರಿದು ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದಾನೆ. ಗೀತಾ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಳು. ಕೊಲೆಗೆ ಈವರೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಯ ಪತ್ತೆಗಾಗಿ ಜಾಲ ಬೀಸಲಾಗಿದೆ ಎಂದು ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಜಿ. ತಿಳಿಸಿದ್ದಾರೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Comments are closed.