ಕರ್ನಾಟಕ

ಹವಾಮಾನ ವೈಪರೀತ್ಯ; ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ

Pinterest LinkedIn Tumblr


ಬೆಂಗಳೂರು: ಕೇರಳ, ಶ್ರೀಲಂಕಾದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಮಳೆ ಆರಂಭಗೊಂಡಿದೆ.

ವರುಣನ ಆರ್ಭಟದಿಂದ ವಾಹನ ಸವಾರರು ಪರದಾಡುವಂತಾಗಿದೆ. ರಾಜ್ಯಾದ್ಯಂತ ಇನ್ನು ಎರಡು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ತಿಳಿಸಿದ್ದಾರೆ.

ಅಶೋಕ ನಗರ, ಮಲ್ಲೇಶ್ವರಂ, ಶ್ರೀರಾಂಪುರ, ಮೆಜೆಸ್ಟಿಕ್, ಮಹಾಲಕ್ಷ್ಮಿ ಲೇಔಟ್, ಶಿವಾನಂದ ಸರ್ಕಲ್, ವಿಧಾನಸೌಧ ಪರಿಸರ ಸೇರಿದಂತೆ ಬೆಂಗಳೂರಿನಾದ್ಯಂತ ಮಳೆ ಸುರಿಯುತ್ತಿದೆ.

ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಸುರಿಯತೊಡಗಿದೆ. ದಕ್ಷಿಣ ಕನ್ನಡದ ಕಡಬ, ಸುಬ್ರಹ್ಮಣ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ.

-ಉದಯವಾಣಿ

Comments are closed.