ಕರ್ನಾಟಕ

ಮಾ.23 ರಿಂದ ಏ.6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

Pinterest LinkedIn Tumblr


ಬೆಂಗಳೂರು: ಮಾ.23 ರಿಂದ ಏ.6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ದ್ವಿತೀಯ ಪಿಯು ಪರೀಕ್ಷೆ ಯಶಸ್ವಿಯಾಗಿದ್ದು, ಪರೀಕ್ಷೆಯಲ್ಲಿಯೂ ಯಾವುದೇ ಅಕ್ರಮ ನಡೆಯದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.

ನಗರದಲ್ಎಲಿ ಮಾತನಾಡಿ, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಅಲ್ಲದೆ, ಬೇನಾಮಿ ಹೆಸರಿನಲ್ಲಿ ಪರೀಕ್ಷೆ ಬರೆಯುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಸುಮಾರು 2,817 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಕೇಂದ್ರಗಳಿಗೆ ಹಾಗೂ ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಭದ್ರತೆ ಒದಗಿಸಲಾಗಿದೆ ಎಂದರು.

Comments are closed.