ಕರ್ನಾಟಕ

ಕಾಂಗ್ರೆಸ್ ಉಚ್ಛಾಟಿತ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಬಿಜೆಪಿ ಸೇರ್ಪಡೆ

Pinterest LinkedIn Tumblr

ಬೆಂಗಳೂರು: ವಿರೋಧಿ ಚಟುವಟಿಕೆ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಯಾಗಿದ್ದ ದೇವರಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು‌.

ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಮತ್ತು ಪಾವಗಡದ ಜಿ.ಪಂ.ಸದಸ್ಯ(ಮಾಜಿ ಮಂತ್ರಿ ವೆಂಕಟರಮಣಪ್ಪ ಪುತ್ರ) ಕುಮಾರಸ್ವಾಮಿ ಇದೇ ವೇಳೆ ಬಿಜೆಪಿಗೆ ಸೇರ್ಪಡೆಯಾದರು.

ಶಾಸಕ ನಡಹಳ್ಳಿ ಅವರು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆಗೊಂಡಿದ್ದರು. ನಂತರ ಜೆಡಿಎಸ್‌ ಪಕ್ಷದ ಜತೆ ಗುರುತಿಸಿಕೊಂಡಿದ್ದ ಅವರು ಇದೀಗ ಬಿಜೆಪಿಗೆ ಸೆರ್ಪಡೆಗೊಂಡಿದ್ದಾರೆ.

Comments are closed.