ಕರ್ನಾಟಕ

ಭೀಕರ ಅಫಘಾತ; ಕಾರು ಹೊಡೆದು ಮೂವರು ಶಾಲಾ ವಿದ್ಯಾರ್ಥಿಗಳ ಸಾವು

Pinterest LinkedIn Tumblr


ಕೋಲಾರ: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಶಾಲಾ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಗುರುವಾರ ಕೋಲಾರದ ವಡಗೂರು ಕ್ರಾಸ್ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಸಂಭವಿಸಿದೆ.

ಬೈಕ್ ಗೆ ಡಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋದ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಮಕ್ಕಳ ಮೇಲೆ ಹರಿದು ಹೋದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಮೃತ ಮಕ್ಕಳು ಕೆಂಬೋಡಿ ಗ್ರಾಮದ ಜನತಾ ಶಾಲೆಯ ವಿದ್ಯಾರ್ಥಿಗಳು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

-ಉದಯವಾಣಿ

Comments are closed.