ಕರ್ನಾಟಕ

ಲಿಂಗಾಯತ ಧರ್ಮಕ್ಕೆ ಶಿಫಾರಸ್ಸು: ಸಿಎಂಗೆ ಮಾತೆ ಮಹಾದೇವಿ ಅಭಿನಂದನೆ

Pinterest LinkedIn Tumblr


ಬೆಂಗಳೂರು: ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡಿ ಕೇಂದ್ರಕ್ಕೆ ಶಿಫಾರಸು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಗದ್ಗುರು ಮಾತೆ ಮಹಾದೇವಿ ಶನಿವಾರ ಅಭಿನಂದಿಸಿದ್ದಾರೆ.

ಕಳೆದ ಮಾ.19ರಂದು ನಡೆದ ಸಚಿವ ಸಂಪುಟದಲ್ಲಿ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ವಿರೋಧಿಸಿದ್ದ ಕೆಲ ಸಚಿವರ ಮನವೊಲಿಸಿ, ಸಿದ್ದರಾಮಯ್ಯ ಲಿಂಗಾ ಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡಲು ಮುಂದಾಗಿ ದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಲಿಂಗಾಯತರು ಮತ್ತು ವೀರಶೈವ ಲಿಂಗಾಯತ, ಬಸವತತ್ವದಲ್ಲಿ ನಂಬಿಕೆ ಉಳ್ಳವರು ಎಂಬ ಹೆಸರಿನಲ್ಲಿ ಲಿಂಗಾಯತರಿಗೆ ಧಾರ್ಮಿಕ ಅಲ್ಪ ಸಂಖ್ಯಾತರ ಸ್ಥಾನಮಾನದ ಶಿಫಾರಸಿಗೆ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಂಡಿದ್ದಾರೆ. ಅಲ್ಪ ಸಂಖ್ಯಾತರ ಆಯೋಗವೂ ಸಹ ಇದಕ್ಕೆ ಮಾನ್ಯತೆ ನೀಡಿದೆ ಎಂದು ತಿಳಿಸಿದರು.

ಕೇಂದ್ರ ಸಚಿವ ಅನಂತ್‍ಕುಮಾರ್ ಮತ್ತಿತರರು ಲಿಂಗಾಯತ ಧರ್ಮದ ಪ್ರತ್ಯೇಕತೆಗೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ. ವಿಚಾರವಾದಿಗಳು, ಹಿಂದುಳಿದ ವರ್ಗದವರು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಲೋಕಸಭೆಯಲ್ಲಿ ಮಂಡಿಸಲ್ಪಟ್ಟರೆ ಖಂಡಿತವಾಗಿ ಬೆಂಬಲಿಸುವರೆಂಬ ವಿಶ್ವಾಸ ನಮಗಿದೆ ಎಂದು ಮಾತೆ ಮಹಾದೇವಿ ತಿಳಿಸಿದರು.

Comments are closed.