ಕರ್ನಾಟಕ

ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ನಂ 1; ಶಾ ಯಡವಟ್ಟು!

Pinterest LinkedIn Tumblr

ದಾವಣಗೆರೆ: ಇತ್ತೀಚೆಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರೊಬ್ಬರು ಹೇಳಿರುವ ಪ್ರಕಾರ, ಒಂದು ವೇಳೆ ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಸ್ಪರ್ಧೆ ನಡೆದರೆ ಅದರಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ನಂ 1 ಪಟ್ಟ ಕೊಡಬಹುದಂತೆ! ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪಿಸುವ ಭರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯಡವಟ್ಟು ಮಾಡಿಕೊಂಡ ಪ್ರಸಂಗ ಮಂಗಳವಾರ ನಡೆಯಿತು!

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ನಂ 1 ಸರ್ಕಾರ ಎಂದು ಹೇಳಿದ್ದರು. ಕೂಡಲೇ ಪಕ್ಕದಲ್ಲೇ ಕುಳಿತಿದ್ದ ಸಂಸದ ಪ್ರಹ್ಲಾದ್ ಜೋಶಿ ಅವರು ಶಾ ಅವರ ಕಿವಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಎಂದು ಹೇಳಿದರು.

ತಕ್ಷಣವೇ ತಪ್ಪನ್ನು ತಿದ್ದಿಕೊಂಡ ಅಮಿತ್ ಶಾ ಅವರು ಸಿದ್ದರಾಮಯ್ಯ ಸರ್ಕಾರ ದೇಶದಲ್ಲಿಯೇ ನಂಬರ್ 1 ಭ್ರಷ್ಟಾಚಾರದ ಸರ್ಕಾರ ಎಂದು ಸಮಜಾಯಿಷಿ ನೀಡಿದರು.

ಶಾ ಸತ್ಯವನ್ನೇ ಹೇಳಿದ್ದಾರೆ; ಕಾಗೋಡು

ಯಡಿಯೂರಪ್ಪನವರ ಬಗ್ಗೆ ಅಮಿತ್ ಶಾ ಇರೋದನ್ನೇ ಹೇಳಿದ್ದಾರೆ. ಆದರೆ ಅದನ್ನೇ ದೊಡ್ಡದು ಮಾಡೋದು ಬೇಡ. ಶಾ ಅವರ ಮನಸ್ಸಿನಲ್ಲಿ ಇರೋದನ್ನು ಬಾಯಲ್ಲಿ ಹೇಳಿದ್ದಾರೆ ಎಂದು ಸಚಿವ ಕಾಗೋಡು ತಿಮ್ಮಪ್ಪ ತಿರುಗೇಟು ನೀಡಿದ್ದಾರೆ.

-ಉದಯವಾಣಿ

Comments are closed.