ಕರ್ನಾಟಕ

ನೂರಕ್ಕೆ ನೂರು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ: ಸಿದ್ದು

Pinterest LinkedIn Tumblr


ಮೈಸೂರು: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಿಂದ ಪ್ರಚಾರ ಆರಂಭಿಸಿದ್ದಾರೆ.

ಬಳಿಕ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಉದ್ಬೂರು ಗ್ರಾಮದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನತೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂರಕ್ಕೆ ನೂರರಷ್ಟು ಈ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ನಾನು ಈ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ

ನನಗೆ ರಾಜಕೀಯವಾಗಿ ಮರು ಜನ್ಮ ಕೊಟ್ಟ ಕ್ಷೇತ್ರ ಚಾಮುಂಡೇಶ್ವರಿ. ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ ಕೊನೆಯ ಚುನಾವಣೆಯನ್ನು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಎದುರಿಸುತ್ತೇನೆ ಎಂದರು.

ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿಯವರು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಕಡೆ ತೆರಳಿದರು.

ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ ಮುಖ್ಯಮಂತ್ರಿಯವರು ಪಕ್ಷದ ಹಿರಿಯ ಮುಖಂಡರ ಮನೆಗಳಿಗೂ ಭೇಟಿ ನೀಡಿದರು.

Comments are closed.