ಕರ್ನಾಟಕ

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ, ಧರೆಗುರುಳಿದ ಮರಗಳು; ಹಲವೆಡೆ ವರುಣನ ಅಬ್ಬರ

Pinterest LinkedIn Tumblr


ಬೆಂಗಳೂರು: ಬಿಸಿಲಿನ ಝಳದಿಂದ ತತ್ತರಿಸಿ ಹೋಗಿದ್ದ ಜನರಿಗೆ ವರುಣ ದೇವ ಶುಕ್ರವಾರ ಸಂಜೆ ತುಸು ತಂಪು ನೀಡಿದ್ದಾನೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಸಂಜೆ ಭಾರಿ ಮಳೆಯಾಗಿದೆ. ಬೆಂಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ.

ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಲ್ಲೇಶ್ವರ, ಯಶವಂತಪುರದಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ.

ನೆಲಮಂಗಲ, ದೊಡ್ಡಬಳ್ಳಾಪುರ, ತಾವರೆಕೆರೆಯಲ್ಲಿ ಗಾಳಿ, ಗುಡುಗು ಸಹಿ ಭಾರಿ ಮಳೆಯಾಗಿದೆ.

ಹಾಸನ, ಬೆಂಗಳೂರು ಗ್ರಾಮಾಂತರ, ಕೋಲಾರದಲ್ಲಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

Comments are closed.