ಕರ್ನಾಟಕ

ಬಿಎಸ್​ವೈ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು: ವಿ. ಸೋಮಣ್ಣ

Pinterest LinkedIn Tumblr


ಬೆಂಗಳೂರು: ಹನೂರು ಕ್ಷೇತ್ರದಲ್ಲಿ ಯಾರಿಗೆ ಕೊಟ್ಟರೂ ಒಪ್ಪಿಕೊಳ್ಳುತ್ತೇನೆ. ಆದರೆ, ಬಿಎಸ್​ವೈ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​​ಗೆ ಹೋಗಲ್ಲ. ಗೋವಿಂದರಾಜನಗರ ಕ್ಷೇತ್ರದಿಂದ ಸ್ಪರ್ಧಿಸಲು ನಮ್ಮ ಕ್ಷೇತ್ರದ ಜನ ನನ್ನ ಮನೆಗೆ ಬಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ಚಾಮರಾಜನಗರದ ಹನೂರಿನಿಂದ ಟಿಕೆಟ್ ಕೊಟ್ರೆ ಸ್ಪರ್ಧಿಸುತ್ತೇನೆ. ಪಕ್ಷದ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ಬಿಎಸ್​ವೈ ಮನೆ ಮುಂದೆ ಪರಿಮಳ ನಾಗಪ್ಪ ಕಾಯುತ್ತಿದ್ದಾರೆ. ಹನೂರು ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಟ್ರೂ ಒಪ್ಪಿಕೊಳ್ತೇನೆ. ಆದರೆ, ಬಿಎಸ್​ವೈ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಹೇಳಿದರು,

ನನ್ನ ಪುತ್ರ ಅರುಣ್​ಗೆ ಅರಸೀಕೆರೆಯಿಂದ ಸ್ಪರ್ಧಿಸಲು ಬಿ.ಎಸ್.ಯಡಿಯೂರಪ್ಪನವರೇ ಸೂಚನೆ ನೀಡಿದ್ದಾರೆ. ಈಗಾಗಲೇ ಅರಸೀಕೆರೆಯಲ್ಲಿ ಕೆಲಸ ಮಾಡ್ತಿದ್ದಾನೆ. ಅಮಿತ್ ಷಾ ಹಾಗೂ ಬಿಎಸ್ ವೈ ಬೇಡ ಅಂದ್ರೆ ಮಗನೂ ಅರಸಿಕೆರೆಯಿಂದ ಸ್ಪರ್ಧಿಸಲ್ಲ ಎಂದು ಪ್ರತಿಕ್ರಿಯಿಸಿದರು.

Comments are closed.