ಕರ್ನಾಟಕ

ಲಿಂಗಾಯತರಿಗೆ 40ಕ್ಕೂ ಹೆಚ್ಚು ಕಾಂಗ್ರೆಸ್‌ ಟಿಕೆಟ್‌

Pinterest LinkedIn Tumblr


ಹುಬ್ಬಳ್ಳಿ: ಲಿಂಗಾಯತರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಋಣಿಯಾಗಿದ್ದು, ಚುನಾವಣೆಯಲ್ಲಿ ಅವರು ಋಣ ತೀರಿಸುತ್ತಾರೆ. ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ 40ಕ್ಕೂ ಹೆಚ್ಚು ಲಿಂಗಾಯತ ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಟಿಕೆಟ್‌ ನೀಡುವ ಭರವಸೆಯಿದೆ ಎಂದು
ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ ಕುಲಕರ್ಣಿ ಹೇಳಿದರು. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲಿಂಗಾಯತ ಧರ್ಮ ಮಾನ್ಯತೆಗೆ ಶಿಫಾರಸು ಮಾಡುವ ಮಹತ್ವದ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಹಿಂದಿನ ಯಾವ ಮುಖ್ಯಮಂತ್ರಿಗಳು ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಲು ಮುಂದಾಗಿರಲಿಲ್ಲ ಎಂದು ಹೇಳಿದರು.

-ಉದಯವಾಣಿ

Comments are closed.