ಕರ್ನಾಟಕ

ವಿದ್ಯಾರ್ಥಿಗಳ ಗಮನಕ್ಕೆ; SSLC, PUC ರಿಸಲ್ಟ್ ದಿನಾಂಕ ಘೋಷಣೆ

Pinterest LinkedIn Tumblr


ಬೆಂಗಳೂರು: ಮೇ 7ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಇಂಟರ್ ನೆಟ್ ನಲ್ಲಿ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಮುಕ್ತಾಯಗೊಂಡಿದೆ. ಮೇ 8ರಂದು ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಏಪ್ರಿಲ್ ಕೊನೆಯ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸೇಠ್ ಹೇಳಿದರು.

ಈ ಬಾರಿ ಅತೀ ಹೆಚ್ಚು ಫಲಿತಾಂಶ ಬರಲಿದೆ. ಮೇ 8ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಕೀ ಉತ್ತರ ಪ್ರಕಟ. ಪರೀಕ್ಷಾ ಸುಧಾರಣಾ ಕ್ರಮ ತೃಪ್ತಿ ತಂದಿದೆ ಎಂದರು.

-ಉದಯವಾಣಿ

Comments are closed.