ಕರ್ನಾಟಕ

ಬೆಂಗಳೂರಲ್ಲಿ ದಾಖಲೆ ಇಲ್ಲದ 1.5 ಕೋಟಿ ರೂ. ವಶ

Pinterest LinkedIn Tumblr


ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಈ ಸಂದರ್ಭದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.5 ಕೋಟಿ ರೂಪಾಯಿ ಹಣವನ್ನು ಬೆಂಗಳೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾರುತಿ ಬಲೆನೊ ಕಾರಿನಲ್ಲಿ ರಾಯಚೂರಿನ ಸುಭಾಷ್‌ ಎನ್ನುವವರು ಹಣ ಕೊಂಡೊಯ್ಯುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು 1.5 ಕೋಟಿ ರೂಪಾಯಿ ವಶಪಡಿಸಿಕೊಂಡರು.

ರಾಯಚೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ಮುದುಗಲ್‌ ವಾಸಿ ಸುಭಾಷ್‌ ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದಾರೆ ಎಂದು ಹೇಳಲಾಗಿದೆ.

ಈ ಹಣಕ್ಕೆ ಸುಭಾಷ್‌ ಅವರ ಬಳಿ ಯಾವುದೇ ದಾಖಲೆಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್‌.ಜೆ. ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ನಡೆಸಲಾಯಿತು.

Comments are closed.