ಕರ್ನಾಟಕ

ಪಾರದರ್ಶಕ ಚುನಾವಣೆ ನಡೆಯೋದು ಕಷ್ಟ; ದೇವೇಗೌಡರ ಆತಂಕವೇನು?

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆ ಪಾರದರ್ಶಕವಾಗಿ ನಡೆಯೋದು ಕಷ್ಟ ಎಂಬುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಆಯಕಟ್ಟಿನ ಸ್ಥಳದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್ ಗಳನ್ನು ತಮಗೆ ಬೇಕಾದ ಸ್ಥಳಗಳಲ್ಲಿ ನಿಯೋಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೂ ಪತ್ರ ಬರೆದು ಕೆಲವು ಸಲಹೆ ನೀಡಿದ್ದೇನೆ ಎಂದರು.

ಕೇಂದ್ರದಿಂದಲೂ ಅಧಿಕಾರಿಗಳನ್ನು ಕರೆಯಿಸಿ ನಿಯೋಜಿಸುವಂತೆ ಮನವಿ ಮಾಡಿಕೊಂಡಿದ್ದೇನೆ. ಆ್ಯಂಬುಲೆನ್ಸ್, ಪೊಲೀಸ್ ಜೀಪ್ ಗಳಲ್ಲಿ ಹಣ ರವಾನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಸದ್ಯದ ಪರಿಸ್ಥಿತಿ ನೋಡಿದ್ರೆ ಯಾವ ಪಕ್ಷಕ್ಕೂ ಬಹುಮತ ಸಿಗೋದು ಕಷ್ಟ ಎಂಬಂತಿದೆ ಎಂದು ಹೇಳಿದರು.

-ಉದಯವಾಣಿ

Comments are closed.