ಕರ್ನಾಟಕ

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಅಮಿತ್ ಶಾ

Pinterest LinkedIn Tumblr

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದರು.

ಅಮಿತ್ ಶಾ ಅವರು ಗದ್ದಿಗೆಗೆ ತೆರಳಿ ಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತದನಂತರ ಸಿದ್ಧಾರೂಢರ ಮೂರ್ತಿಯನ್ನು ಸ್ಮರಣಿಕೆಯಾಗಿ ನೀಡಿ ಸನ್ಮಾನಿಸಲಾಯಿತು.

ಧಾರವಾಡದಲ್ಲಿ ವರಕವಿ ಡಾ. ದ.ರಾ.ಬೇಂದ್ರೆ ಭವನಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರು ಬೇಂದ್ರೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಬೇಂದ್ರೆ ಅವರ ಸೊಸೆ ಪದ್ಮಾಬಾಯಿ ಬೇಂದ್ರೆ ಅವರನ್ನು ಸನ್ಮಾನಿಸಿದ ಶಾ ಅವರಿಗೆ ಬೇಂದ್ರೆ ಕುಟುಂಬದಿಂದ ನಾಕು ತಂತಿಯ ಇಂಗ್ಲಿಷ್ ಅನುವಾದ ಕವನ ಗುಚ್ಚ ಪುಸ್ತಕ ನೀಡಲಾಯಿತು.

ಇನ್ನೂ ಸಿದ್ದರಾಮಯ್ಯ ಸರ್ಕಾರದ ಒಡೆದು ಆಳುವ ನೀತಿ ವಿರೋಧಿಸಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಮಿತ್ ಶಾ ಭಾಗಿಯಾಗಿದ್ದರು.

ಈ ವೇಳೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದ ಪ್ರಹ್ಲಾದ್ ಜೋಶಿ, ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಶಾಸಕ ಅರವಿಂದ್ ಬೆಲ್ಲದ್ ಉಪಸ್ಥಿತರಿದ್ದರು.

ಅಮಿತ್ ಶಾ ಅವರ ಮುಂದಿನ ಕಾರ್ಯಕ್ರಮಗಳು ಈ ರೀತಿ ಇವೆ. 23 ದಿನಗಳ ಸಂಸತ್‌ ಕಲಾಪ ಸಂಪೂರ್ಣ ವ್ಯರ್ಥವಾಗಲು ಕಾರಣವಾದ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸಂಸದರೊಂದಿಗೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಅಮಿತ್ ಶಾ ಭಾಗವಹಿಸಿದರು.

ಗದಗದ ರೋಣ ತಾಲೂಕಿನ ಅಬ್ಬಿಗೆರೆ ಗ್ರಾಮದಲ್ಲಿರುವ ಆನಂದೇಶ್ವರ ಪ್ರೌಢಶಾಲೆಯಲ್ಲಿ ನಡೆಯುವ ಮುಷ್ಠಿ ಅಕ್ಕಿ ಸಂಗ್ರಹ ಅಭಿಯಾನದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರೈತರ ಜೊತೆಗೆ ಮಧ್ಯಾಹ್ನ ಅಮಿತ್ ಶಾ ಭೋಜನ ಮಾಡಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ, ಗದಗದಲ್ಲಿರುವ ಪಂಡಿತ್‌ ಪುಟ್ಟರಾಜ ಗವಾಯಿ ಆಶ್ರಮ, ಗದುಗಿನ ವೀರನಾರಾಯಣಸ್ವಾಮಿ ದೇವಸ್ಥಾನ ಹಾಗೂ ಕವಿ ಕುಮಾರವ್ಯಾಸನ ಸನ್ನಿಧಿಗೆ ಭೇಟಿ ನೀಡಲಿದ್ದಾರೆ.

ಹುಬ್ಬಳ್ಳಿಯಲ್ಲಿರುವ ಮೂರು ಸಾವಿರ ಮಠಕ್ಕೆ ಭೇಟಿ ನೀಡಲಿರುವ ಅವರು, ಅಲ್ಲಿಂದ ದುರ್ಗದಬೈಲ್‌ವರೆಗೆ ರೋಡ್ ಷೋ ನಡೆಸಲಿದ್ದಾರೆ. ಹುಬ್ಬಳ್ಳಿ ಸಮೀಪದ ಹೆಬ್ಬಳ್ಳಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹುಬ್ಬಳ್ಳಿಯ ಹೋಟೆಲ್ ವೊಂದರಲ್ಲಿ ರಾತ್ರಿ 8.30ಕ್ಕೆ ವ್ಯಾಪಾರಿಗಳು ಕೈಗಾರಿಕೋದ್ಯಮಿಗಳ ಜೊತೆ ಸಭೆ ನಡೆಸಲಿದ್ದಾರೆ.

Comments are closed.