ಕರ್ನಾಟಕ

ಹಾಸ್ಯ ಮಾಡಲು ಹೋಗಿ ಅಪಹಾಸ್ಯಕ್ಕೀಡಾದ ರಾಹುಲ್‌ ಗಾಂಧಿ

Pinterest LinkedIn Tumblr


ಹೊಸದಿಲ್ಲಿ: ಕೇಂದ್ರ ಸರಕಾರ, ಪ್ರಧಾನಿ, ಸಚಿವರು, ಬಿಜೆಪಿಯನ್ನು ನಿಂದಿಸುವ ಭರದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತೊಮ್ಮೆ ಮುಜುಗರಕ್ಕೀಡಾಗಿದ್ದಾರೆ.

ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಹಾಗೂ ಪತ್ನಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸುವ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಶಿರಡಿ ಟ್ರಸ್ಟ್‌ ಅನ್ನು ಹೆಸರಿಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.

ಶಿರಡಿ ಇಂಡಸ್ಟ್ರೀಸ್‌ ಹೆಸರಿನಲ್ಲಿ ಪಿಯೂಷ್‌ ಗೋಯಲ್‌ ಹಲವು ಅಕ್ರಮಗಳನ್ನು ಮಾಡಿಕೊಂಡಿದ್ದಾರೆ ಎಂಬ ವರದಿಗಳು ಪ್ರಕಟಗೊಂಡಿರುವುದನ್ನು ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. ಇದಕ್ಕೆ #PiyushGhotalaReturns ಎಂದು ಹ್ಯಾಷ್‌ ಟ್ಯಾಗ್‌ ಕೂಡ ಹಾಕಿದ್ದಾರೆ.

ಶಿರಡಿ ಎಂದು ಹೆಸರಿಸಿರುವುದನ್ನು ಶಿರಡಿ ಸಾಯಿಬಾಬಾ ಟ್ರಸ್ಟ್‌ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಇದಕ್ಕೆ ಕೂಡಲೇ ಪ್ರತಿಕ್ರಿಯಿಸಿರುವ ಟ್ರಸ್ಟ್‌ ಅಧ್ಯಕ್ಷ ಸುರೇಶ್‌ ಹವಾರೆ, ರಾಹುಲ್‌ ಜೀ, ಶಿರಡಿಯನ್ನು ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಎಳೆದು ತಂದಿರುವುದು ಖಂಡನೀಯ. ಶಿರಡಿಯ ಕೋಟ್ಯಂತರ ಭಕ್ತರಿಗೆ ಇದು ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

ನಂತರ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಿರಡಿ ಸಾಯಿಬಾಬಾ ಟ್ರಸ್ಟ್‌ ಅನ್ನು ನಾವು ಗೌರವಿಸುತ್ತೇವೆ ಎಂದು ತಿಳಿಸಿದೆ. ಅಲ್ಲದೇ ವಿಷಾದವನ್ನೂ ವ್ಯಕ್ತಪಡಿಸಿದೆ.

Comments are closed.