ಕರ್ನಾಟಕ

ಕಾಂಗ್ರೆಸ್‌ನಲ್ಲೇ ಇರ್ತೇನೆ: ರಂಜಿತಾ ವರಸೆ ಬದಲು

Pinterest LinkedIn Tumblr


ಮಂಡ್ಯ: ಕಾಂಗ್ರೆಸ್ ಪಕ್ಷದಲ್ಲೇ ಉಳಿಯಲು ನಿರ್ಧಾರ. ಮಾಡಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಂಸದೆ ರಮ್ಯಾ ಅವರ ತಾಯಿ ರಂಜಿತಾ ಯೂಟರ್ನ್ ಹೊಡೆದಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಂಜಿತಾ ಘೋಷಿಸಿದ್ದರು. ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ, ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು.

ಈಗ ರಂಜಿತಾ ದಿಢೀರ್ ನಿರ್ಧಾರ ಬದಲಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಯಾರಿಗೇ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಗೆಲುವಿಗಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

’28 ವರ್ಷಗಳಿಂದ ಕಾಂಗ್ರೆಸ್‌ಗಾಗಿ ದುಡಿಯುತ್ತಿದ್ದೇನೆ. ಪಕ್ಷ ದಲ್ಲಿ ಯಾವುದಾದರೂ ಸಣ್ಣ ಸ್ಥಾನ ಕೊಡಿ ಎಂದು ಮನವಿ ಸಲ್ಲಿಸಿದರೂ ಹತ್ತಾರು ವರ್ಷಗಳಿಂದ ನನ್ನ ಬೇಡಿಕೆಗೆ ಸ್ಪಂದಿಸಿಲ್ಲ. ರಾಜ್ಯದಲ್ಲಿ ನಮ್ಮ ಪಕ್ಷ ವೇ ಅಧಿಕಾರದಲ್ಲಿದ್ದರೂ ತಮಗ್ಯಾವ ಜವಾಬ್ದಾರಿಯೂ ಸಿಗಲಿಲ್ಲ. ಪಕ್ಷ ದ ಮುಖಂಡರು ಭರವಸೆ ನೀಡುವುದರಲ್ಲೇ ಕಾಲಹರಣ ಮಾಡಿದ್ದಾರೆ. ಹೀಗಾಗಿ ನಾನೆಷ್ಟು ದಿನ ಕಾಯಲಿ? ಮುಂದಿನ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಯೋಚನೆ ಮಾಡುತ್ತಿದ್ದೇನೆ. ಈ ಬಗ್ಗೆ ಶೀಘ್ರ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ” ಎಂದು ಈ ಮೊದಲು ರಂಜಿತಾ ಹೇಳಿದ್ದರು.

Comments are closed.