ಕರ್ನಾಟಕ

ದಿನೇಶ್‌ ಗುಂಡುರಾವ್‌ ವಿರುದ್ದ ವ್ಯಾಪಕ ಆಕ್ರೋಶ: ಬಿಜೆಪಿ ಪ್ರತಿಭಟನೆ

Pinterest LinkedIn Tumblr


ಮೈಸೂರು: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್‌ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ದಿನೇಶ್‌ ಕುಂಡುರಾವ್‌ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ದಿನೇಶ್‌ ಗುಂಡುರಾವ್‌ ಹೇಳಿಕೆ ಖಂಡಿಸಿ ಬಿಜೆಪಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಸಂಸದೆ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್‌, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ದಿನೇಶ್‌ ಗುಂಡುರಾವ್‌ ವಿರುದ್ಧ ತೀವ್ರವಾಗಿ ಕಿಡಿ ಕಾರಿದ್ದಾರೆ.

ನಾಥ ಪಂಥದ ಓರ್ವ ಸಂತನ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿರುವುದು ಕಾಂಗ್ರೆಸ್‌ ಸಂಸ್ಕೃತಿ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

-ಉದಯವಾಣಿ

Comments are closed.