ಕರ್ನಾಟಕ

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ; ಹಾಲಪ್ಪ, ರೇಣುಕಾಚಾರ್ಯ, ಕುಮಾರ್ ಬಂಗಾರಪ್ಪ ಸೇರಿದಂತೆ 82 ಅಭ್ಯರ್ಥಿಗಳ ಹೆಸರು ಘೋಷಣೆ

Pinterest LinkedIn Tumblr

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸೋಮವಾರ ಬಿಡುಗಡೆ ಮಾಡಿದೆ.

ಎರಡನೇ ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿರುವ 82 ಅಭ್ಯರ್ಥಿಗಳ ಹೆಸರಿದೆ.

ಕಳೆದ ಭಾನುವಾರ ತಡರಾತ್ರಿ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಎರಡೂ ಪಟ್ಟಿ ಸೇರಿ ಒಟ್ಟು 154 ಅಭ್ಯರ್ಥಿಗಳ ಹೆಸರು ಅಂತಿಮಗೊಂಡತಾಗಿದ್ದು, ಮತ್ತೊಂದು ಪಟ್ಟಿ ಬಿಡುಗಡೆಯನ್ನು ಬಿಜೆಪಿ ಕಾಯ್ದಿರಿಸಿದೆ.

ಶಿವಾಜಿನಗರದಿಂದ ಕಟ್ಟಾ ಸುಬ್ರಮಣ್ಯ ನಾಯ್ಡು, ಸಾಗರ– ಹರತಾಳು ಹಾಲಪ್ಪ, ಸೊರಬ–ಕುಮಾರ್ ಬಂಗಾರಪ್ಪ, ತೀರ್ಥಹಳ್ಳಿ– ಅರಗ ಜ್ಞಾನೇಂದ್ರ, ಹೊನ್ನಾಳಿ– ಎಂ.ಪಿ.ರೇಣುಕಾಚಾರ್ಯ, ಶಾಂತಿ ನಗರ– ವಾಸುದೇವ ಮೂರ್ತಿ, ಬಳ್ಳಾರಿ– ಸಣ್ಣ ಫಕೀರಪ್ಪ, ತುರುವೇಕೆರೆ–ಮಸಾಲೆ ಜಯರಾಂ ಸೇರಿ ಮುಂತಾದವರ ಹೆಸರು ಎರಡನೇ ಪಟ್ಟಿಯಲ್ಲಿದೆ.

ಮೊದಲ ಪಟ್ಟಿಯಲ್ಲಿ ಸಂಸದರಾದ ಬಿ.ಎಸ್. ಯಡಿಯೂರಪ್ಪ, ಬಿ. ಶ್ರೀರಾಮುಲು, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ, ಪರಿಷತ್‌ ಸದಸ್ಯರಾದ ವಿ.ಸೋಮಣ್ಣ, ಬಸನಗೌಡ ಪಾಟೀಲ ಯತ್ನಾಳ ಸೇರಿ ಹಲವು ಪ್ರಮುಖ ನಾಯಕರು ಟಿಕೆಟ್‌ ಗಿಟ್ಟಿಸಿದ್ದರು.

ಎರಡನೇ ಪಟ್ಟಿಯಲ್ಲಿ ಬೋಪಯ್ಯ ಹೆಸರಿಲ್ಲ; ಚಿಕ್ಕೋಡಿ, ಯಲಬುರ್ಗಾ, ಬಳ್ಳಾರಿ, ತುಮಕೂರು ನಗರ, ಮಧುಗಿರಿಯಲ್ಲಿ ಬದಲು

* ಎರಡನೇ ಪಟ್ಟಿಯಲ್ಲೂ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರಿಗೆ ಟಿಕೆಟ್‌ ನೀಡಿಲ್ಲ.

* ತುಮಕೂರು ನಗರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸೊಗಡು ಶಿವಣ್ಣ ಅವರ ಬದಲಿಗೆ ಜಿ.ಬಿ. ಜ್ಯೋತಿ ಗಣೇಶ್‌ ಅವರಿಗೆ ನೀಡಲಾಗಿದೆ.

* ಮಧುಗಿರಿ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಬಂದ ಎಂ.ಆರ್‌. ಹುಲಿನಾಯ್ಕರ್‌ ಅವರಿಗೆ ನೀಡಲಾಗಿದೆ.

* ಚಿಕ್ಕೋಡಿ–ಸದಲಗಾ ಕ್ಷೇತ್ರದಲ್ಲಿ ಶಶಿಕಲಾ ಜೊಲ್ಲೆ ಅವರ ಪತಿ, ಪಕ್ಷದ ಮುಖಂಡ ಅಣ್ಣಾಸಾಹೇಬ್ ಜೊಲ್ಲೆ ಅವರಿ ಟಿಕೆಟ್‌ ನೀಡಲಾಗಿದೆ.

* ಯಲಬುರ್ಗಾ ಕ್ಷೇತ್ರದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಲಪ್ಪ ಬಸಪ್ಪ ಆಚಾರ್‌ಗೆ ಟಿಕೆಟ್‌ ನೀಡಲಾಗಿದೆ.

* ಬಳ್ಳಾರಿ ಕ್ಷೇತ್ರದಲ್ಲಿ ರಾಯಚೂರು ಮಾಜಿ ಸಂಸದ ಸಣ್ಣ ಫಕ್ಕೀರಪ್ಪ ಅವರಿಗೆ ನೀಡಲಾಗಿದೆ.

* ಮಾಲೂರು ಕ್ಷೇತ್ರದಲ್ಲಿ ಭೂ ಹಗರಣ ಆರೋಪ ಹೊತ್ತಿರುವ ಎಸ್‌.ಎನ್‌. ಕೃಷ್ಣಯ್ಯ ಶೆಟ್ಟಿಗೆ ನೀಡಲಾಗಿದೆ.

* ಹೆಬ್ಬಾಳ ಕ್ಷೇತ್ರದ ಶಾಸಕ ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ಕ್ಷೇತ್ರ ಬದಲಿಸಿ ಶಿವಾಜಿ ನಗರ ಕ್ಷೇತ್ರಕ್ಕೆ ನೀಡಲಾಗಿದೆ.

* ಚಾಮರಾಜ ನಗರದಲ್ಲಿ ವಿಧಾನಪರಿಷತ್‌ ಮಾಜಿ ಸದಸ್ಯ ಮಲ್ಲಿಕಾರ್ಜುನಪ್ಪಗೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಪತಿ–ಪತ್ನಿಗೆ ಟಿಕೆಟ್‌
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರಕ್ಕೆ ಶಶಿಕಲಾ ಜೊಲ್ಲೆ ಅವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್‌ ನೀಡಲಾಗಿತ್ತು. ಎರಡನೇ ಪಟ್ಟಿಯಲ್ಲಿ ಶಶಿಕಲಾ ಜೊಲ್ಲೆ ಅವರ ಪತಿ ಅಣ್ಣಾಸಾಹೇಬ್‌ ಜೊಲ್ಲೆ ಅವರಿಗೆ ಚಿಕ್ಕೋಡಿ ಸದಲಗಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಹೀಗಾಗಿ, ಜಿಲ್ಲೆಯೊಂದರಲ್ಲಿ ಒಂದೇ ಪಕ್ಷದಿಂದ ಎರಡು ಕ್ಷೇತ್ರಗಳಲ್ಲಿ ಪತಿ–ಪತ್ನಿ ಕಣಕ್ಕಿಳಿದಿದ್ದಾರೆ.

82 ಅಭ್ಯರ್ಥಿಗಳ ಎರನೇ ಪಟ್ಟಿ…

Comments are closed.