ಕರ್ನಾಟಕ

ಬೆಳಗಾವಿಯಲ್ಲಿ ಮತದಾರರಿಗೆ ಹಂಚಲು ತಂದಿದ್ದ 7 ಕೋಟಿ ರೂ. ಮೌಲ್ಯದ ನಕಲಿ ನೋಟು ವಶ; ಓರ್ವನ ಬಂಧನ

Pinterest LinkedIn Tumblr

ಬೆಳಗಾವಿ: ಚುನಾವಣೆ ವೇಳೆ ಮತದಾರಾರೈಗೆ ಹಂಚಲು ತಂದಿದ್ದರೆನ್ನಲಾದ 7 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಬೆಳಗಾವಿ ಪೋಲೀಸರು ಜಪ್ತಿ ಮಾಡಿದ್ದಾರೆ.

ಪ್ರಕರಣ ಸಂಬಂಧ ಓರ್ವನನ್ನು ವಶಕ್ಕೆ ಪಡೆದಿರುವ ಪೋಲೀಸರು ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಪಾಳು ಬಿದ್ದ ಲೋಕೋಪಯೋಗಿ ಇಲಾಖಾ ಕಟ್ಟಡದಲ್ಲಿ ಸಂಗ್ರಹಿಸಿದ್ದ 500 ಹಾಗೂ 2000 ರೂ. ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ನೋಟುಗಳನ್ನು ಬಚ್ಚಿಟ್ಟಿರುವ ಕುರಿತಂತೆ ಖಚಿತ ಮಾಹಿತಿ ಪಡೆದ ಪೀಓಲೀಸರು ಹಾಗೂ ಚುನಾವಣಾ ಸಿಬ್ಬಂದಿಗಳು ಜತೆಯಾಗಿ ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ವಿಜಯಪುರದ ಅಜಿತಕುಮಾರ ನಿಡೋಣಿ ಯನ್ನು ಬಂಧಿಸಲಾಗಿದೆ.

ಘಟನೆ ಕುರಿತಂತೆ ಬೆಳಗಾವಿ ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Comments are closed.