ಕರ್ನಾಟಕ

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ನಗರಸಭೆ ಮಾಜಿ ಅಧ್ಯಕ್ಷನ ಬಂಧನ

Pinterest LinkedIn Tumblr

ಬನಹಟ್ಟಿ (ಬಾಗಲಕೋಟೆ ಜಿಲ್ಲೆ): ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ, ಇಲ್ಲಿನ ನಗರಸಭೆ ಮಾಜಿ ಅಧ್ಯಕ್ಷ ಮೌಲಾಸಾಬ್‌ ಬೂದಿಹಾಳ (65) ಎಂಬಾತನನ್ನು ಬುಧವಾರ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಳಿಗ್ಗೆ ತನ್ನ ಮನೆಯ ಕಾಂಪೌಂಡ್‌ ಒಳಗೆ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡುವ ನೆಪದಲ್ಲಿ ಒಳಗೆ ಕರೆದ ಆರೋಪಿ, ಅಡುಗೆ ಮನೆಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಕೂಗಿಕೊಂಡಿದ್ದಾಳೆ. ಆಗ ಅಲ್ಲಿಯೇ ಕೆಲಸ ಮಾಡುತ್ತಿದ್ದ ಸೋದರ ಮಾವ ಓಡಿ ಬಂದು ರಕ್ಷಣೆ ಮಾಡಿದ್ದಾರೆ.

ವಿಷಯ ತಿಳಿದ ಸ್ಥಳೀಯರು ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿ ಕುಟುಂಬದವರು ನೀಡಿದ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿದ ಪೊಲೀಸರು ಮೌಲಾಸಾಬ್‌ನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.

Comments are closed.