ಕರ್ನಾಟಕ

ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಶೋಭಾ ಕರಂದ್ಲಾಜೆ ಸ್ಪಷ್ಟನೆ

Pinterest LinkedIn Tumblr

ಬೆಂಗಳೂರು: ‘ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಲೋಕಸಭಾ ಸದಸ್ಯತ್ವದ ಅವಧಿ ಇನ್ನೂ ಒಂದು ವರ್ಷ ಇದೆ. ವರಿಷ್ಠರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಗೌರವಿಸುತ್ತೇನೆ’ ಎಂದರು.

ಸಂಸದರಾದ ಬಿ.ಎಸ್‌.ಯಡಿಯೂರಪ್ಪ (ಶಿಕಾರಿಪುರ) ಹಾಗೂ ಬಿ.ಶ್ರೀರಾಮುಲು (ಮೊಳಕಾಲ್ಮುರು) ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಬಾದಾಮಿಯಿಂದ ಸಂಸದ ಪಿ.ಸಿ. ಗದ್ದಿಗೌಡರ್‌ ಹಾಗೂ ಯಶವಂತಪುರದಿಂದ ಶೋಭಾ ಅವರಿಗೆ ಟಿಕೆಟ್‌ ನೀಡಲಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. 2008ರ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಶೋಭಾ ಗೆದ್ದಿದ್ದರು. ಕೆಜೆಪಿಗೆ ವಲಸೆ ಹೋಗಿದ್ದ ಅವರು ಕಳೆದ ಚುನಾವಣೆಯಲ್ಲಿ ರಾಜಾಜಿನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದಿದ್ದರು.

Comments are closed.