ಕರ್ನಾಟಕ

ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತಪಡಿಸಿದ ಸಿಎಂ

Pinterest LinkedIn Tumblr


ಮೈಸೂರು: ಎರಡು ಕ್ಷೇತ್ರಗಳಲ್ಲಿ ಸಿಎಂ ಸ್ಪರ್ಧೆ ಬಗ್ಗೆ ಉಂಟಾಗಿದ್ದ ಗೊಂದಲ, ಅನು ಮಾನಗಳಿಗೆ ಸ್ವತಃ ಸಿದ್ದರಾಮಯ್ಯ ಗುರುವಾರ ತೆರೆ ಎಳೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಅವರು ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಚಾಮುಂಡೇಶ್ವರಿಯಲ್ಲಿ ಗೆಲುವು ಸಾಧಿಸುವ ಬಗ್ಗೆ ಮುಖ್ಯಮಂತ್ರಿ ಗಳಿಗೆ ಸಂಪೂರ್ಣ ಭರವಸೆ ಇದ್ದಂತೆ ಕಾಣಿಸುತ್ತಿಲ್ಲ. ಈ ಕಾರಣಕ್ಕೆ ಅವರು ಬಾದಾಮಿ ಯಿಂದಲೂ ಸ್ಪರ್ಧಿಸಲು ಮುಂದಾಗಿದ್ದಾರೆ.

ಈ ಹಿಂದೆಯೇ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇದು ಮಾಧ್ಯಮಗಳ ಸೃಷ್ಟಿ ಎಂದು ಸಿದ್ದರಾಮಯ್ಯ ಜಾರಿಕೊಂಡಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿಗಳು ಬಾದಾಮಿ ಯಲ್ಲಿ ಸ್ಪರ್ಧಿಸುವುದನ್ನು ಖಚಿತಪಡಿಸಿದ್ದಾರೆ.

Comments are closed.