ಕರ್ನಾಟಕ

ಕೈ, ಕಮಲ ಬಂಡಾಯ ಅಭ್ಯರ್ಥಿಗಳಿಗೆ ಟಿಕೆಟ್: 58 ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

Pinterest LinkedIn Tumblr

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ 58 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ನಗರದ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್ ಡಿ ದೇವೇಗೌಡ ಅವರು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು. ಇನ್ನು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಬಂಡಾಯವೆದ್ದು ಜೆಡಿಎಸ್ ಸೇರಿದ್ದ ಹಲವರಿಗೆ ಪಕ್ಷ ಟಿಕೆಟ್ ನೀಡಿದೆ.

ಜೆಡಿಎಸ್ ಮೊದಲ ಹಂತದಲ್ಲಿ 126 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅಭ್ಯರ್ಥಿಗಳಿಗೆ ಬಿ ಫಾರಂ ಕೂಡ ನೀಡಲಾಗಿದ್ದು ಬಹಳಷ್ಟು ಅಭ್ಯರ್ಥಿಗಳು ಈಗಾಗಲೇ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

Comments are closed.