ಕರ್ನಾಟಕ

ಮೇಲುಕೋಟೆ ಕ್ಷೇತ್ರದಲ್ಲಿ ಪುಟ್ಟಣ್ಣಯ್ಯ ಪತ್ನಿ, ಪುತ್ರ ನಾಮಪತ್ರ ಸಲ್ಲಿಕೆ

Pinterest LinkedIn Tumblr


ಮಂಡ್ಯ: ರೈತ ಮುಖಂಡ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ಅವರ ಪತ್ನಿ ಸುನೀತಾ ಮೇಲುಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುನೀತಾ ನಾಮಪತ್ರ ಸಲ್ಲಿಸಿದ್ದಾರೆ. ಸ್ವರಾಜ್ ಇಂಡಿಯಾದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ದರ್ಶನ್ ಪುಟ್ಟಣ್ಣಯ್ಯ ನಾಮಪತ್ರ ಸಲ್ಲಿಸಿದ್ದಾರೆ.

ದರ್ಶನ್ ವಿದೇಶದಲ್ಲಿ ಇದ್ದು ಬಂದಿರುವುದರಿಂದ ಯಾವುದೇ ಸಮಸ್ಯೆ ಆಗಬಾರದೆಂಬ ಕಾರಣಕ್ಕೆ ಸುನೀತಾ ನಾಮಪತ್ರ ಸಲ್ಲಿಸಿದ್ದಾರೆ.

ಪಾಂಡವಪುರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಚುನಾವಣಾಧಿಕಾರಿ ಎಚ್.ಪಿ.ಕುಮಾರ್‌ಗೆ ನಾಮಪತ್ರ ಸಲ್ಲಿಸಿದ್ದಾರೆ.

ಸಾಹಿತಿ ದೇವನೂರು ಮಹಾದೇವ, ಮಾಜಿ ಶಾಸಕ ಎಚ್.ಬಿ.ರಾಮು, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಎಲ್.ಸಿ.ಮಂಜುನಾಥ್, ರೈತ ಮುಖಂಡ ನಾಗೇಂದ್ರ ಸಾಥ್ ನೀಡಿದ್ದಾರೆ.

ಸಮಾವೇಶ: ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದ್ದು, . ದೇವನೂರು ಮಹಾದೇವ, ಮಾಜಿ ಶಾಸಕ ಎಚ್.ಪಿ.ರಾಮು, ಚಾಮರಸ ಮಾಲೀಪಾಟಿಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾದರ್, ಎಲ್.ಡಿ.ರವಿ, ದರ್ಶನ್ ಪುಟ್ಟಣ್ಣಯ್ಯ , ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದಾರೆ.

Comments are closed.