ಕರ್ನಾಟಕ

ಏಪ್ರಿಲ್‌ 24ಕ್ಕೆ ಬಾದಾಮಿಯಿಂದ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

Pinterest LinkedIn Tumblr


ಬಾಗಲಕೋಟ: ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬಾದಾಮಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ.

ಸಿಎಂ ಸ್ವಾಗತಕ್ಕೆ ಬಾದಾಮಿಯಲ್ಲಿ ಬೆಂಬಲಿಗರಿಂದ ಭರದ ಸಿದ್ಧತೆ ನಡೆಯುತ್ತಿದ್ದು, ಸೋಮವಾರ ಮಧ್ಯಾಹ್ನ 1 ಗಂಟೆಯ ಬಳಿಕ ಸಿಎಂ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ವೇಳಾಪಟ್ಟಿ ಬದಲಾಗಿದೆ.

ಸಿಎಂ ಬಾದಾಮಿಯಲ್ಲಿ ಕಣಕ್ಕಿಳಿದರೆ ಅವರ ವಿರುದ್ದ ಬಿಜೆಪಿಯಿಂದ ಯಾರು ಕಣಕ್ಕಿಳಿಯಲಿದ್ದಾರೆಂಬುದು ಇನ್ನೂ ಬಹಿರಂಗವಾಗಿಲ್ಲ. ಶ್ರೀರಾಮುಲು ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.

Comments are closed.