ದಾವಣಗೆರೆ: ಕಠುವಾ, ಉನ್ನಾವೋ ಅತ್ಯಾಚಾರ ಪ್ರಕರಣಗಳ ಕರಾಳ ನೆನಪು ಮಾಸುವ ಮುನ್ನವೇ ದಾವಣಗೆರೆ ಜಿಲ್ಲೆಯ ಎಸ್‌ಎಸ್‌ಎಂ ನಗರದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದಾನೆ.
ಸುಬಾನ್ ಸಾಬ್ (55) ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ. ಮನೆಯಲ್ಲಿ ಯಾರು ಇಲ್ಲದ ವೇಳೆ ಸುಬಾನ್ ಸಾಬ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಹೇಯ ಕೃತ್ಯದಲ್ಲಿ ತೀವ್ರ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಪೊಲೀಸರು ಕಾಮುಕ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆಜಾದ್ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.