ಕರ್ನಾಟಕ

ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಇಲ್ಲ ಎಂದ ಬಿಎಸ್‌ವೈ: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Pinterest LinkedIn Tumblr

ನಂಜನಗೂಡು: ರಾಜ್ಯದ ಪ್ರತಿಷ್ಠಿತ ಕಣವಾಗಿರುವ ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು ಆದರೆ ವಿಜಯೇಂದ್ರ ಸ್ಪರ್ಧೆ ಮಾಡುತ್ತಿಲ್ಲ ಎಂಬ ಸುದ್ದಿ ತಿಳಿದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇನ್ನು ವರುಣಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಇದರಿಂದ ತೀವ್ರ ಕುತೂಹಲ ಕೆರಳಿಸಿರುವ ವರುಣಾ ಕ್ಷೇತ್ರದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಅಧಿಕೃತ ಮಾಹಿತಿ ಸಂಜೆಯೊಳಗೆ ತಿಳಿಯಲಿದೆ.

ನಂಜನಗೂಡಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಮಾಡುತ್ತಿಲ್ಲ ಎಂದು ಹೇಳಿದ ಕ್ಷಣ ಅಲ್ಲಿನ ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ವಿಜಯೇಂದ್ರಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ನಂಜನಗೂಡು ಸಮಾವೇಶದಲ್ಲಿದ್ದ ಕುರ್ಚಿ ಛೇರುಗಳನ್ನು ಹೊಡೆದು ಪುಡಿ ಪುಡಿ ಮಾಡಿದ್ದಾರೆ.

Comments are closed.