ಕರ್ನಾಟಕ

ಬಿಎಸ್ ವೈ ಪುತ್ರನಿಗೆ ವರುಣಾ ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ !

Pinterest LinkedIn Tumblr

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿವೈ ವಿಜಯೇಂದ್ರ ಅವರಿಗೆ ವರುಣಾ ಕ್ಷೇತ್ರದಲ್ಲಿ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಎಸ್ ವೈ ಪುತ್ರನ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವರುಣಾ ಕ್ಷೇತ್ರದ ಸರಗೂರು ಗ್ರಾಮದ ನಿವಾಸಿ ಗುರುಸ್ವಾಮಿ ಅಲಿಯಾಸ್ ಗವಿಯಪ್ಪ (36) ಎಂದು ಗುರುತಿಸಲಾಗಿದೆ.

ವಿಜಯೇಂದ್ರ ಅವರಿಗೆ ಪಕ್ಷದ ಟಿಕೆಟ್ ನೀಡದ ಕಾರಣ ಮನನೊಂದು ಗುರುಸ್ವಾಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಕುಟುಂಬದವರು ಮಾತ್ರ ಗುರುಸ್ವಾಮಿ ಆತ್ಮಹತ್ಯೆ ನಿಖರ ಕಾರಣ ನೀಡುತ್ತಿಲ್ಲ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಗಿಳಿಗೆರೆ ಪೊಲೀಸರು, ಗುರುಸ್ವಾಮಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಇದುವರೆಗೂ ಪ್ರಕರಣ ದಾಖಲಾಗಿಲ್ಲ. ಆದರೆ ಬಿಜೆಪಿ ಕಾರ್ಯಕರ್ತನ ಸಾವು ಅನುಮಾನಸ್ಪದವಾಗಿದೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ಕೈತಪ್ಪಿದ ಕಾರಣ ನಂಜನಗೂಡಿನ ಹುಲ್ಲಹಳ್ಳಿ ವೃತ್ತದ ಬಳಿ ಆಕ್ರೋಶ ವ್ಯಕ್ತಪಡಿಸಿದ್ದವರೊಂದಿಗೆ ಗುರುಸ್ವಾಮಿ ಕೂಡ ಇದ್ದರು. ವಿವಾಹವಾಗಿದ್ದ ಗೂಳಪ್ಪ ಅವರಿಗೆ ಪತ್ನಿ ಹಾಗೂ ಒಂದು ಮಗು ಇದೆ.

Comments are closed.