ಕರ್ನಾಟಕ

ಈ ಬಾರಿಯ ಚುನಾವಣಾ ಕಣದಲ್ಲಿ ಉಳಿದ 2,655 ಅಭ್ಯರ್ಥಿಗಳು

Pinterest LinkedIn Tumblr

ಬೆಂಗಳೂರು: ಮೇ 12ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದ ಒಟ್ಟು 3509 ಅಭ್ಯರ್ಥಿಗಳ ಪೈಕಿ ಅಂತಿಮವಾಗಿ 2655 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.

ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, 583 ಮಂದಿ ನಾಮಪತ್ರ ಹಿಂದಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ 271 ಮಂದಿ ನಾಮಪತ್ರ ತಿರಸ್ಕೃತಗೊಂಡಿದ್ದು, ಅಂತಿಮವಾಗಿ 2655 ಅಭ್ಯರ್ಥಿಗಳು ಮಾತ್ರ ಅಖಾಡದಲ್ಲಿದ್ದಾರೆ.

ಆಡಳಿತರೂಢ ಕಾಂಗ್ರೆಸ್ 222 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಬಿಜೆಪಿ ಎಲ್ಲಾ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.

ಇನ್ನು ಜೆಡಿಎಸ್(201) ಮತ್ತು ಬಿಎಸ್ಪಿ(18) ಸೇರಿ 219 ಕ್ಷೇತ್ರಗಳಲ್ಲಿ ಸ್ಪರ್ಥಿಸುತ್ತಿದೆ. ಪಕ್ಷೇತರರಾಗಿ 1155 ಮಂದಿ ಮತ್ತು ಇತರೆ ಪಕ್ಷದಿಂದ 800 ಮಂದಿ ಸ್ಪರ್ಧಿಸುತ್ತಿದ್ದಾರೆ.

ಅಂತಿಮವಾಗಿ ಚುನಾವಣಾ ಕಣದಲ್ಲಿರುವ 2655 ಮಂದಿ ಪೈಕಿ 2436 ಮಂದಿ ಪುರಷರಿದ್ದರೆ, 219 ಮಂದಿ ಮಹಿಳಾ ಅಭ್ಯರ್ಥಿಗಳಿದ್ದಾರೆ.

Comments are closed.