ಕರ್ನಾಟಕ

ನಮ್ಮ ವಿರುದ್ಧ ಮಾತನಾಡಿದರೆ ನಿಖಿಲ್ ಗೌಡರ ಕ್ಯಾಸೆಟ್ ಬಿಡುಗಡೆ ಮಾಡಬೇಕಾಗುತ್ತದೆ: ಎಚ್.ಸಿ.ಬಾಲಕೃಷ್ಣ ಎಚ್ಚರಿಕೆ

Pinterest LinkedIn Tumblr

ರಾಮನಗರ :ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ವಿರುದ್ಧ ಮಾಗಡಿಯ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಹೊಸ ಬಾಂಬ್ ಬೆದರಿಕೆ ಹಾಕಿದ್ದಾರೆ ನಿಖಿಲ್ ಗೌಡ ನಮ್ಮ ವಿರುದ್ಧ ಮಾತನಾಡಿದರೆ ಅವರ ಕ್ಯಾಸೆಟ್ ಗಳನ್ನು ಬಿಡುಗಡೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬದಲಾದ ರಾಜಕಾರಣದಲ್ಲಿ ಬಂಡಾಯ ಎದ್ದಿರುವ ಬಾಲಕೃಷ್ಣರನ್ನು ಈ ಬಾರಿ ಸೋಲಿಸಲೇ ಬೇಕೆಂದು ಪಣ ತೊಟ್ಟಿರುವ ಕುಮಾರಸ್ವಾಮಿ ಅವರು ಈಗಾಗಲೇ ಜೆಡಿಎಸ್ ಅಭ್ಯರ್ಥಿ ಮಂಜು ಪರ ಚುನಾವಣಾ ಪ್ರಚಾರವನ್ನು ನಡೆಸಿದ್ದಾರೆ.

ಈ ಮಧ್ಯೆ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್ ಗೌಡ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಬಾಲಕೃಷ್ಣರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದಾರೆ.

ಇದರಿಂದ ಒಂದಷ್ಟು ಹಿನ್ನಡೆಯಾಗುತ್ತಿರುವುದನ್ನು ಅರಿತ ಬಾಲಕೃಷ್ಣ, ನಿಖಿಲ್‍ಗೌಡ ಅವರಪ್ಪನ ಪರ ಮತ ಕೇಳಿಕೊಂಡು ಹೋಗಲಿ ಅದನ್ನು ಬಿಟ್ಟು ನಮ್ಮಗಳ ಬಗ್ಗೆ ಮಾತನಾಡಿದರೆ ಅವರ ಕ್ಯಾಸೆಟ್‍ಗಳು ನಮ್ಮ ಬಳಿಯಿವೆ, ಅವನ್ನು ಬಿಡುಗಡೆ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯ ಸಂದೇಶವನ್ನು ಸಾರ್ವಜನಿಕವಾಗಿ ರವಾನಿಸಿದ್ದಾರೆ.

ಪ್ರಚಾರಕ್ಕೆ ಹೋದ ಕಡೆಗಳಲ್ಲಿ ನಿಖಿಲ್‍ಗೌಡ ನಮ್ಮ ವಿರುದ್ಧ ಇಲ್ಲಸಲ್ಲದ ಟೀಕೆ ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ ನಮ್ಮ ಬಳಿಯಿರುವ ಅವರ ಬಹಳಷ್ಟು ಕ್ಯಾಸೆಟ್‍ಗಳನ್ನು ಬಿಡುಗಡೆ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಇದೀಗ ಬಾಲಕೃಷ್ಣ ಅವರು ಹೇಳಿರುವ ಕ್ಯಾಸೆಟ್ ವಿಚಾರ ಕ್ಷೇತ್ರದ ಜನರ ಕುತೂಹಲ ಕೆರಳಿಸಿದ್ದು, ಚರ್ಚೆಗೂ ಗ್ರಾಸವಾಗಿದೆ.

Comments are closed.