ಕರ್ನಾಟಕ

HDK ಬಿಜೆಪಿ ಜತೆ ಕೈಜೋಡಿಸಿದರೆ ಮನೆಯಿಂದ ಹೊರಕ್ಕೆ: ದೇವೇಗೌಡ

Pinterest LinkedIn Tumblr


ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಕೈಜೋಡಿಸಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪದ ನಡುವೆಯೇ ಖಾಸಗಿ ವಾಹಿನಿ ಸಂದರ್ಶನವೊಂದರಲ್ಲಿ ಮಾತನಾಡಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ಕುಮಾರಸ್ವಾಮಿ ಮತ್ತೆ ಬಿಜೆಪಿ ಜತೆ ಕೈಜೋಡಿಸಿದರೆ ಮನೆಯಿಂದಲೇ ಹೊರಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯದ ವಿಷಯದಲ್ಲಿ ಕುಮಾರಸ್ವಾಮಿ ನನ್ನ ಮಾತನ್ನು ಮೀರಿ ಯಾವ ನಿರ್ಧಾರ ಕೈಗೊಳ್ಳಬಾರದು. ಒಂದು ವೇಳೆ ಮಾತು ಮೀರಿ ಕುಮಾರಸ್ವಾಮಿ ಬಿಜೆಪಿ ಸಖ್ಯ ಬೆಳೆಸಿದರೆ ಮನೆಯಿಂದ ಹೊರಹಾಕುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

2006ರಲ್ಲಿ ಕುಮಾರಸ್ವಾಮಿ ಬುದ್ಧಿ ಕಲಿತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಸುಳ್ಳು ಸುದ್ದಿ ಎಂದು ಹೇಳುವ ಮೂಲಕ ಅಮಿತ್ ಶಾ ಹಾಗೂ ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿ ಮಾತುಕತೆ ನಡೆಸಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯನವರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.

-ಉದಯವಾಣಿ

Comments are closed.