ಕರ್ನಾಟಕ

ಚೀಟಿ ಹಿಡಿದುಕೊಂಡು 15 ನಿಮಿಷ ಮಾತನಾಡಿ: ಮೋದಿಗೆ ಸಿದ್ಧು ಸವಾಲು

Pinterest LinkedIn Tumblr


ಹೊಸದಿಲ್ಲಿ : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗೊಂದು ಪ್ರತಿಸವಾಲನ್ನು ಒಡ್ಡಿದ್ದಾರೆ.

“ಚೀಟಿ ನೋಡಿಕೊಂಡು ನೀವು ಕರ್ನಾಟಕದಲ್ಲಿ ಬಿ ಎಸ್‌ ಯಡಿಯೂರಪ್ಪ ಅವರ ಬಿಜೆಪಿ ಸರಕಾರದ ಸಾಧನೆಯ ಬಗ್ಗೆ ಹದಿನೈದು ನಿಮಿಷಗಳ ಕಾಲ ಮಾತನಾಡುವಿರಾ?’ ಎಂದು ಸಿದ್ಧರಾಮಯ್ಯ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ನಿನ್ನೆ ಚಾಮರಾಜ ಜಿಲ್ಲೆಯ ಸಂತೇಮಾರನಹಳ್ಳಿಯಲ್ಲಿ ಮಾಡಿದ ಚುನಾವಣಾ ಪ್ರಚಾರ ಭಾಷಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ “ಕೈಯಲ್ಲಿ ಚೀಟಿ ಹಿಡಿದುಕೊಳ್ಳದೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಮಾಡಿರುವ ಸಾಧನೆಯ ಬಗ್ಗೆ ನಿಮಗೆ ತಿಳಿದಿರುವ ಹಿಂದಿ, ಇಂಗ್ಲಿಷ್‌ ಅಥವಾ ಯಾವುದೇ ಭಾಷೆಯಲ್ಲಿ , ಬೇಕಿದ್ದರೆ ನಿಮ್ಮ ತಾಯಿ ಸೋನಿಯಾ ಗಾಂಧಿ ಅವರ ಮಾತೃ ಭಾಷೆಯಲ್ಲಾದರೂ ಸರಿ, ಹದಿನೈದು ನಿಮಿಷಗಳ ಮಾತನಾಡಿ ತೋರಿಸಿ; ಆಗಲೇ ಕರ್ನಾಟಕದ ಜನರು ನಿಮ್ಮ ಬಗ್ಗೆ ಒಂದು ಅಭಿಪ್ರಾಯಕ್ಕೆ ಬರುತ್ತಾರೆ’ ಎಂದು ಸವಾಲು ಹಾಕಿದ್ದಾರೆ.

ಇದಕ್ಕೆ ಪ್ರತಿಯಾಗಿ ಸಿದ್ಧರಾಮಯ್ಯ ಮೋದಿಗೆ ಸವಾಲು ಹಾಕಿದ್ದಾರೆ.

-ಉದಯವಾಣಿ

Comments are closed.