ಕರ್ನಾಟಕ

ಮೋದಿಯ ಮಹದಾಯಿ ಹೇಳಿಕೆಗೆ ಸಿಎಂ ಹೇಳಿದ್ದೇನು…?

Pinterest LinkedIn Tumblr

ಬಾಗಲಕೋಟೆ: ಇಂದು ಗದಗನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡ್ತಿದೆ ಅಂತಾ ಆರೋಪಿಸಿದ್ದರು. ಪಿಎಂ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಈ ರೀತಿಯ ಹೇಳಿಕೆಗಳನ್ನು ಕೊಡ್ತಿದ್ದಾರೆ ಅಂತಾ ತಿರುಗೇಟು ನೀಡಿದ್ರು.

ಜಿಲ್ಲೆಯ ಬಾದಾಮಿ ತಾಲೂಕಿನ ನಂದಕೇಶ್ವರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಮಹದಾಯಿ ನದಿ ಜೋಡಣೆ ಸಮಸ್ಯೆಯನ್ನ ಬಗೆಹರಿಸುವ ಮನಸ್ಸಿಲ್ಲ. ಈ ದೇಶದ ಪ್ರಧಾನಿ ಯಾರು? ರೈತರ ಹೋರಾಟ ನಡೆಯುತ್ತಿರುವುದು ನಾಲ್ಕು ವರ್ಷಗಳಿಂದ. ಆದರೆ ಈ ಸಮಸ್ಯೆ ಬಗೆಹರಿಸುವಲ್ಲಿ ಮೋದಿ ವಿಫಲರಾಗಿ ಕನ್ನಡಿಗರಿಗೆ ದ್ರೋಹ ಮಾಡಿದ್ದಾರೆ. ಜನರು ಅವರಿಗೆ ಬಯ್ಯುತ್ತಿದ್ದರು. ಆದ್ದರಿಂದ ಮೋದಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಈ ರೀತಿಯ ಹೇಳಿಕೆ ನೀಡಿದ್ದಾರೆ. ಮೋದಿಯವರು ಮಹದಾಯಿ ವಿಚಾರದಲ್ಲಿ ಮಧ್ಯಪ್ರವೇಶ ವಹಿಸದೇ ರಾಜ್ಯಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಮಹಾದಾಯಿ ನದಿ ಜೋಡಣೆ ವಿಚಾರವಾಗಿ ಪ್ರಧಾನಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ನಾನು ಎಲ್ಲ ಪ್ರಯತ್ನಗಳನ್ನು ಮಾಡಿದ್ದೀನಿ. ಪ್ರಧಾನಿ ಸೇರಿದಂತೆ ಎಲ್ಲ ರಾಜ್ಯದ ಸಿಎಂಗಳ ಜೊತೆ ಮಾತನಾಡಿದೆ. ಅವರಿದ್ದಲ್ಲೇ ಹೋಗಿ ಮಾತನಾಡಲು ಸಿದ್ದವಾಗಿದ್ದೆ. ಈ ಸಮಸ್ಯೆಯನ್ನು ಬಗೆಹರಿಸುವ ಶಕ್ತಿ ಪ್ರಧಾನಿ ಮೋದಿಗಿತ್ತು. ನಾನು ಸಾಕಷ್ಟು ಬಾರಿ ಪ್ರಧಾನಿಗೂ ಪತ್ರ ಬರೆದಿದ್ದೆ. ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಇತ್ತು. ಅಲ್ಲದೆ ಕೇಂದ್ರದಲ್ಲೂ ಅವರ ಸರ್ಕಾರ ಇತ್ತು. ಆದ್ದರಿಂದ ಈ ಸಮಸ್ಯೆಯನ್ನು ಬಗೆಹರಿಸಬಹುದಿತ್ತು. ಆದರೆ ಪ್ರಧಾನಿ ಮೋದಿ ಈ ಸಮಸ್ಯೆಯನ್ನ ಬಗೆಹರಿಸುವ ಕೆಲಸ ಮಾಡಲಿಲ್ಲ ಎಂದ್ರು.

Comments are closed.