ಕರ್ನಾಟಕ

ಚಾಮುಂಡೇಶ್ವರಿ:ಸಿಎಂ ಪರ ಪ್ರಚಾರಕ್ಕಿಳಿದ ನಟ ದರ್ಶನ್‌;ಪ್ರತಿಭಟನೆ

Pinterest LinkedIn Tumblr


ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು ,ತಾರಾ ಪ್ರಚಾರಕರು ಒಬ್ಬರಾದಂತೆ ಒಬ್ಬರು ಬಂದು ಸಿಎಂ ಪರ ಪ್ರಚಾರ ನಡೆಸುತ್ತಿದ್ದಾರೆ.

ಶನಿವಾರ ನಟ ದರ್ಶನ್‌ ಅವರು ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದು, ನಾಗನಹಳ್ಳಿಯಲ್ಲಿ ಜೆಡಿಎಸ್‌ ಕಾಯಕರ್ತರು ಪ್ರತಿಭಟನೆ ನಡೆಸಿ ವಿರೋಧ ತೋರಿದ್ದಾರೆ.

ಅಂಬರೀಷ್‌ ಅವರ ಸಚಿವ ಸ್ಥಾನ ಕಿತ್ತುಕೊಂಡಾಗ ಯಾಕೆ ಮಾತನಾಡಲಿಲ್ಲ, ಕಾವೇರಿ ಪರ ಹೋರಾಟ ಯಾಕೆ ಮಾಡಲಿಲ್ಲ ಎಂದು ಪ್ರತಿಭಟನಾ ನಿರತರು ದರ್ಶನ್‌ ಅವರನ್ನು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರೂ ಪ್ರತಿಭಟನೆ ನಡೆಸಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

-Udayavani

Comments are closed.