ಬೆಂಗಳೂರು: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ದ ಅಸಮಾಧಾನ ಹೊಂದಿದ್ದ ನಟ, ಮಾಜಿ ಸಚಿವ ಅಂಬರೀಶ್ ಅವರನ್ನು ಜೆಡಿಎಸ್ ನಾಯಕ ಕುಮಾರಸ್ವಾಮಿ ಬೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಖಾರಣವಾಗಿದೆ.
ಶನಿವಾರ ರಾತ್ರಿ ಬೆಂಗಳೂರಿನ ಗಾಲ್ಫ್ ಕ್ಲಬ್ ಬಳಿ ಇರುವ ಅಂಬರೀಶ್ ಅವರ ನಿವಾಸಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಂದು ಗಂಟೆಗೆ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಭಯ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗೆಗೆ ಚರ್ಚೆ ನಡೆಸಿದ್ದಾರೆ ಎನ್ನಾಲಾಗಿದೆ.
ನಟ, ಶಾಸಕರಾದ ಅಂಬರೀಶ್ ಜೆಡಿಎಸ್ ಕುರಿತಂತೆ ಒಅಲವು ಹೊಂದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಂಬರೀಶ್ ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದ್ದರು. ಆದರೆ ಇದನ್ನು ಮರೆತ ಸಿಎಂ ಅಂಬರೀಶ್ ಗೆ ದ್ರೋಹ ಎಸಗಿದ್ದಾರೆ. ಎಂದು ಭೇಟಿಯ ಬಳಿಕ ಹಾಸನದಲ್ಲಿ ಮಾದ್ಯಮದ ಜತೆ ಮಾತನಾಡಿದ ಕುಮಾರಸ್ವಾಮಿ ಹೇಳಿದ್ದಾರೆ.
ಇಬ್ಬರ ಭೇಟಿಯ ಸಮಯದಲ್ಲಿ ಅಂಬರೀಶ್ ತಾವು ಜೆಡಿಎಸ್ ಗೆ ಸೇರುವ ಕುರಿತು ಶೀಘ್ರವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿರುವುದಾಗಿ ಹೇಳಿದ್ದಾರೆಂದು ತಿಳಿದುಬಂದಿದೆ.
ಏನೇ ಆದರೂ ವಿಧಾನಸಭೆ ಚುನಾವಣೆ ವೇಳೆ ನಡೆದಿರುವ ಈ ಭೇಟಿ ಇತರೆ ರಾಜಕೀಯ ಪಕ್ಷಗಳಿಗೆ ಚಿಂತೆಗೀಡು ಮಾಡಿದೆ.
Comments are closed.