ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಶೇ. 4.06ರಷ್ಟು ಏರಿಕೆ : ಸರ್ಕಾರಿ ಶಾಲೆಗಳ ಫಲಿತಾಂಶ ಉತ್ತಮ, ಶೇ.75.12ರಷ್ಟು ಫಲಿತಾಂಶ

Pinterest LinkedIn Tumblr

ಬೆಂಗಳೂರು: 2017-18ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗಿದ್ದು, ಕಳೆದ ಬಾರಿಗಿಂತ ಈ ಭಾರಿಯ ಫಲಿತಾಂಶದಲ್ಲಿ ಶೇ. 4.06ರಷ್ಟು ಏರಿಕೆ ಕಂಡುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, 2017-18ನೇ ಸಾಲಿನಲ್ಲಿ ಒಟ್ಟಾರೆ ಫಲಿತಾಂಶದಲ್ಲಿ ಶೇ. 4.06ರಷ್ಟು ಏರಿಕೆಯಾಗಿದೆ ಎಂದು ಮಾಹಿತಿ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 838088 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 602802 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಆ ಮೂಲಕ ಒಟ್ಟಾರೆ ಫಲಿತಾಂಶ 71.93ರಷ್ಟಿದ್ದು, 2016-17ನೇ ಸಾಲಿನಲ್ಲಿ 67.87ರಷ್ಟು ಫಲಿತಾಂಶ ಬಂದಿತ್ತು.

ಉತ್ತೀರ್ಣರಾದ ಗಂಡು ಮಕ್ಕಳ ಪ್ರಮಾಣ ಶೇ 66.56(ಶೇ 3.95 ಏರಿಕೆ), ಉತ್ತೀರ್ಣರಾದ ವಿದ್ಯಾರ್ಥಿನಿಯರು ಶೇ 78.01(ಶೇ 3.76 ಏರಿಕೆ). ನಗರ ಭಾಗಕ್ಕಿಂತಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇ 4.62ರಷ್ಟು ಹೆಚ್ಚಿದೆ. ನಗರ ಭಾಗದ ವಿದ್ಯಾರ್ಥಿಗಳು ಶೇ 69.38 ಹಾಗೂ ಗ್ರಾಮೀಣ ಭಾಗದ ಶೇ 74 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸರ್ಕಾರಿ ಶಾಲೆಗಳ ಫಲಿತಾಂಶ ಉತ್ತಮ
ಇನ್ನು ಖಾಸಗಿ ಶಾಲೆಗಳ ಅಬ್ಬರದಲ್ಲಿ ಮಂಕಾಗಿದ್ದ ಸರ್ಕಾರಿ ಶಾಲೆಗಳ ಫಲಿತಾಂಶ ಕೂಡ ಉತ್ತಮವಾಗಿದ್ದು, ಒಟ್ಟು 5, 191 ಸರ್ಕಾರಿ ಶಾಲೆಗಳಿಂದ 2, 85, 594 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 2, 14, 545 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಆ ಮೂಲಕ ಸರ್ಕಾರಿ ಶಾಲೆಗಳ ಒಟ್ಟಾರೆ ಫಲಿತಾಂಶ 75.12ಕ್ಕೆ ಏರಿಕೆಯಾಗಿದೆ. ಉಳಿದಂತೆ ಅನುದಾನಿತ ಶಾಲೆಗಳ ಫಲಿತಾಂಶ 76.27ರಷ್ಟಿದ್ದು, ಅನುದಾನ ರಹಿತ ಶಾಲೆಗಳಲ್ಲಿನ ಫಲಿತಾಂಶ 8.05ರಷ್ಟಿದೆ.

Comments are closed.