ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲಿಗನಾಗಿರುವ ಯಶಸ್‌’ಗೆ ಏನಾಗುವ ಆಸೆ ಗೊತ್ತೇ…?

Pinterest LinkedIn Tumblr

ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಗರದ ಸದ್ವಿದ್ಯಾ ಪ್ರೌಢಶಾಲೆ ವಿದ್ಯಾರ್ಥಿ ಎಂ.ಎಸ್‌.ಯಶಸ್‌ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲಿಗರಾಗಿದ್ದಾರೆ.‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍

ಏರೋನಾಟಿಕ್‌ ಎಂಜಿನಿಯರ್‌ ಆಗುವುದು ಯಶಸ್‌ ಕನಸು. ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಇಂಗ್ಲಿಷ್‌, ತೃತೀಯ ಭಾಷೆ ಕನ್ನಡ ಅಧ್ಯಯನ ಮಾಡಿದ್ದಾರೆ. ಇವರ ತಂದೆ ಶಿವಮಲ್ಲಪ್ಪ ಜೆಎಸ್‌ಎಸ್‌ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ದರ್ಜೆ ಗುಮಾಸ್ತರು. ತಾಯಿ ಗೃಹಿಣಿ.

ಇದೇ ಶಾಲೆಯ ವಿದ್ಯಾರ್ಥಿನಿಯರಾದ ಆರ್‌.ಕೀರ್ತನಾ, ಅದಿತಿ ಎ.ರಾವ್‌, ಮರಿಮಲ್ಲಪ್ಪ ಪ್ರೌಢಶಾಲೆ ವಿದ್ಯಾರ್ಥಿನಿ ಶಿವಾನಿ ಎಂ.ಭಟ್‌ ತಲಾ 624 ಅಂಕ ಪಡೆದಿದ್ದಾರೆ.

Comments are closed.