ಕರ್ನಾಟಕ

ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ; JDS ಪ್ರಣಾಳಿಕೆಯಲ್ಲಿ ಏನಿದೆ?

Pinterest LinkedIn Tumblr


ಬೆಂಗಳೂರು: ಎಚ್ ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಪಕ್ಷ ಸೋಮವಾರ “ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ ಶೀರ್ಷಿಕೆಯುಳ್ಳ ಪ್ರಣಾಳಿಕೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬಿಡುಗಡೆಗೊಳಿಸಿದ್ದಾರೆ.

ಜಾತ್ಯಾತೀತತೆ ನಮ್ಮ ಬದ್ಧತೆ, ಅಭಿವೃದ್ಧಿಗೆ ನಮ್ಮ ಒತ್ತು. 2 ರಾಷ್ಟ್ರೀಯ ಪಕ್ಷಗಳ ಪ್ರಣಾಳಿಕೆಗಿಂತ ಜೆಡಿಎಸ್ ಪ್ರಣಾಳಿಕೆ ಉತ್ತಮವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ಪ್ರಣಾಳಿಕೆ ಹೈಲೈಟ್ಸ್:

*ಲೋಕಾಯುಕ್ತ ಬಲವರ್ಧನೆ, ಎಸಿಬಿ ನಿರ್ಮೂಲನೆ

*ಅಧಿಕಾರಕ್ಕೆ ಬಂದ 24ಗಂಟೆಗಳಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ

* ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡುದಾರರಿಗೆ ಉಚಿತ ವಿದ್ಯುತ್

* ಗ್ರಾಮವಾಸ್ತವ್ಯ ಕಾರ್ಯಕ್ರಮ ಮುಂದುವರಿಕೆ

* ಡಾ.ವಿಷ್ಣುವರ್ಧನ್ ಸಮಾಧಿ ಸ್ಥಳದ ವಿವಾದ ಬಗೆಹರಿಸಲಾಗುವುದು

*ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮೇಲ್ದರ್ಜೆಗೆ ಏರಿಕೆ

*ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ 5 ಸಾವಿರಕ್ಕೆ ಏರಿಕೆ

*65 ವರ್ಷ ಮೇಲ್ಪಟ್ಟ ಹಿರಿಯರಿಗೆ ಮಾಸಿಕ 6 ಸಾವಿರ ರೂಪಾಯಿ ಮಾಸಾಶನ

-Udayavani

Comments are closed.