ಕರ್ನಾಟಕ

ಶ್ರೀರಾಮುಲು ಪರ ನಟ ಸುದೀಪ್ ರೋಡ್ ಶೋ ರದ್ದು; ಪ್ರಚಾರಕ್ಕೆ ಚುನಾವಣಾ ಆಯೋಗ ತಡೆ

Pinterest LinkedIn Tumblr

ಚಿತ್ರದುರ್ಗ: ಮೊಳಕಾಲ್ಮುರು ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಚುನಾವಣಾ ಪ್ರಚಾರಕ್ಕಾಗಿ ನಾಯಕನಹಟ್ಟಿಗೆ ಬಂದಿದ್ದ ನಟ ಕಿಚ್ಚ ಸುದೀಪ್ ಪ್ರಚಾರ ಮಾಡದೇ ವಾಪಸ್ ಹೋಗಿದ್ದಾರೆ.

ಪ್ರಚಾರಕ್ಕಾಗಿ ಚುನಾವಣಾ ಆಯೋಗ ನೀಡಿದ್ದ ಕಾಲಾವಧಿ ಮುಗಿದ ಹಿನ್ನಲೆಯಲ್ಲಿ ಸುದೀಪ್ ವಾಪಸ್ ಹೋಗಿದ್ದಾರೆ. ಆಯೋಗ ಸುದೀಪ್ ಪ್ರಚಾರಕ್ಕೆ ಬೆಳಿಗ್ಗೆ 9 ರಿಂದ 12 ಗಂಟೆವರೆಗೂ ಸಮಯ ನಿಗದಿ ಮಾಡಿತ್ತು. ಆದರೆ ಸುದೀಪ್ ಮಧ್ಯಾಹ್ನ 1 ಗಂಟೆಗೆ ಬಂದರು. ಈ ವೇಳೆ ಚುನಾವಣಾ ಆಯೋಗದ ಅಧಿಕಾರಿಗಳು ಪ್ರಚಾರ ಮಾಡುವಂತಿಲ್ಲ ಎಂದು ತಿಳಿಸಿದರು.

ಪ್ರಚಾರಕ್ಕೆ ತಡೆ ಹಿನ್ನೆಲೆ ಸುದೀಪ್ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ ಮತ್ತು ಹೊರಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಸುದೀಪ್ ವೇಗವಾಗಿ ಪಟ್ಟಣದಿಂದ ಹೊರಟು ಹೋದರು.

ಚುನಾವಣಾ ಪ್ರಚಾರದ ಅವಧಿ ವಿಸ್ತರಣೆಗಾಗಿ ಬಿಜೆಪಿ ಆಯೋಗಕ್ಕೆ ಮನವಿ ಮಾಡಿತು. ಆದರೆ ಅದೇ ಅವಧಿಯಲ್ಲಿ ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿಗಳ ಪ್ರಚಾರಕ್ಕೆ ಅನುಮತಿ ನೀಡಲಾಗಿತ್ತು. ಹೀಗಾಗಿ ಪಟ್ಟಣದಲ್ಲಿ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಬಹುದು ಎಂಬ ಎಚ್ಚರಿಕೆಯಿಂದ ಅವಧಿಯನ್ನು ವಿಸ್ತರಿಸಲು ಅಧಿಕಾರಿಗಳು ಸಮ್ಮತಿಸಲಿಲ್ಲ.

Comments are closed.