ಕರ್ನಾಟಕ

ಬಾದಾಮಿಯಲ್ಲಿ ಕಾಂಗ್ರೆಸ್ ನಾಯಕರೊಬ್ಬರಿಗೆ ಸೇರಿದ ರೆಸಾರ್ಟ್ ಮೇಲೆ ಐಟಿ ದಾಳಿ

Pinterest LinkedIn Tumblr

ಬಾಗಲಕೋಟೆ: ವಿಧಾನಸಬಾ ಚುನಾವಣೆಗೂ ಮುನ್ನವೇ ಬಾದಾಮಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೋಮವಾರ ತಡರಾತ್ರಿ ದೊಡ್ಡ ಶಾಕ್ ನೀಡಿದೆ.

ಕಾಂಗ್ರೆಸ್ ನಾಯಕರೊಬ್ಬರ ರೆಸಾರ್ಟ್ ಮತ್ತು ಹೋಟೆಲ್ ಮೇಲೆ ಐಟಿ ಅಧಿಕಾರಿಗಳು ಮಧ್ಯರಾತ್ರಿ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಕೃಷ್ಣ ಹೆರಿಟೇಜ್ ರೆಸಾರ್ಟ್ ಮೇಲೆ ಅಧಇಕಾರಿಗಳು ದಾಳಿ ನಡೆಸಿದ್ದು, ದಾಳಿ ನಡೆಸಿದ್ದ ಸಂದರ್ಭದಲ್ಲಿ ರೆಸಾರ್ಟ್ ನಲ್ಲಿ ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಎಸ್.ಆರ್.ಪಾಟೀಲ್, ಎಂಎಲ್’ಸಿ ಸಿಎಂ ಇಬ್ರಾಹಿ ಸೇರಿದಂತೆ ಹಲವು ನಾಯಕರಿದ್ದರೆಂದು ತಿಳಿದುಬಂದಿದೆ.

ಇದಲ್ಲದೆ, ಚುನಾವಣಾ ಪ್ರಚಾರಕ್ಕಾಗಿ ಬಾದಾಮಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರೂ ಕೂಡ ಇದೇ ಸಂದರ್ಭದಲ್ಲಿ ರೆಸಾರ್ಟ್ ನಲ್ಲಿದ್ದರು ಎಂದು ವರದಿಗಳು ತಿಳಿಸಿವೆ.

ಆದಾಯ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕ ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.

ಊಟಕ್ಕೆಂದು ಕಾಂಗ್ರೆಸ್ ನಾಯಕರು ರೆಸಾರ್ಟ್ ಗೆ ಬಂದ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯಾಗುತ್ತಿದ್ದಂತೆಯೇ ಸಿಎಂ ಇಬ್ರಾಹಿಂ ಅವರು ತಡರಾತ್ರಿ 2 ಗಂಟೆ ಸುಮಾರಿಗೆ ರೆಸಾರ್ಟ್ ಆವರಣವನ್ನು ಬಿಟ್ಟು ಹೊರ ಹೋಗಿದ್ದರು ಎಂದು ಖಾಸಗಿ ಟಿವಿ ಮಾಧ್ಯಮಗಳು ವರದಿಗಳಲ್ಲಿ ತಿಳಿಸಿವೆ.

Comments are closed.