ಕರ್ನಾಟಕ

ಹ್ಯಾರಿಸ್‌ ಪರ ಅಜರುದ್ದೀನ್‌ ಪ್ರಚಾರ

Pinterest LinkedIn Tumblr

ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎನ್‌.ಎಸ್‌.ಹ್ಯಾರಿಸ್‌ ಪರವಾಗಿ ಮಾಜಿ ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌ ಅವರು ಸೋಮವಾರ ಕ್ಷೇತ್ರದ ವಿವಿಧ ಭಾಗದಲ್ಲಿ ಪ್ರಚಾರ ಸಭೆ ನಡೆಸಿದರು.

ಶಾಂತಿನಗರ ಕ್ಷೇತ್ರದ ಶಾಸಕರಾಗಿ ಹ್ಯಾರೀಸ್‌ ಅವರು ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್‌ ಸೇರಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.

ಕ್ಷೇತ್ರದಲ್ಲಿ ಬಡವರು ಹಾಗೂ ಕೊಳೆಗೇರಿ ವಾಸಿಗಳು ನೆಲೆಸಿರುವ ಪ್ರದೇಶಗಳಲ್ಲಿ ರಸ್ತೆ, ಶೌಚಾಲಯ ಸೇರಿದಂತೆ ಮೂಲಸೌಕರ್ಯ ಕಲ್ಪಿಸಿ ಇಡೀ ಕ್ಷೇತ್ರವನ್ನು ಮಾದರಿ ಮಾಡಲು ಶ್ರಮಿಸಿದ್ದಾರೆ. ಇವರನ್ನು ಮತ್ತೂಮ್ಮೆ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಹ್ಯಾರಿಸ್‌ ಮಾತನಾಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದು, ಮತದಾರರ ನಿರೀಕ್ಷೆಗಳಿಗೆ ಸ್ಪಂದಿಸಿದ್ದೇನೆ. ಮತ್ತೂಮ್ಮೆ ಆಶೀರ್ವಾದ ಮಾಡಿದರೆ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಮಾಡಲಿದ್ದೇನೆ ಎಂದು ಹೇಳಿದರು.

ಕ್ಷೇತ್ರದ ಅಪರಂದಿಪಾಳ್ಯ ಸಮೀಪದ ಭಟ್‌ ಕ್ಲಿನಿಕ್‌, ಗೌತಮಪುರದ ಬಜಾರ್‌ ಸ್ಟ್ರೀಟ್‌, ಮಖಮ್‌ ರಸ್ತೆ, ನೀಲಸಂದ್ರ ಚೌಕ್‌ ಹಾಗೂ ಜಾನ್ಸನ್‌ ಮಾರುಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ರೋಡ್‌ ಶೋ ನಡೆಸಲಾಯಿತು.

-Udayavani

Comments are closed.