ಕರ್ನಾಟಕ

ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಆಪ್ತ ಪ್ರಶಾಂತ್ – ಶಾಸಕ ಅಶೋಕ್ ಖೇಣಿ ಮನೆಯ ಮೇಲೆ ಐಟಿ ದಾಳಿ

Pinterest LinkedIn Tumblr

ಧಾರವಾಡ: ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಅವರ ಆಪ್ತ ಸಹಾಯಕ ಮತ್ತು ಬೀದರ್ ಶಾಸಕ ಅಶೋಕ್ ಖೇಣಿ ಅವರ ಮನೆ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳ ಶೋಧ ನಡೆಸಿದ್ದಾರೆ.

ಸಚಿವ ವಿನಯ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆ ಅವರ ಸಪ್ತಪುರ ಬಳಿಯ ಖುಷಿ ಪಾರ್ಕ್ ನಲ್ಲಿರುವ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಪ್ರಶಾಂತ್ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ ಕುಲಕರ್ಣಿ ಅವರ ಆಪ್ತ ಸಹಾಯಕರೆಂದು ತಿಳಿದುಬಂದಿದ್ದು, ಪ್ರಸ್ತುತ ಪ್ರಶಾಂತ್ ಅವರನ್ನು ಅವರ ಮನೆಯಲ್ಲೇ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ನಿನ್ನೆ ಸಂಜೆಯಷ್ಟೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಶಾಂತ್ ಕೇಕರೆ ಅವರನ್ನು ವಶಕ್ಕೆ ಪಡೆದಿದ್ದರು.

ಕಾಂಗ್ರೆಸ್ ಬೀದರ್ ಅಭ್ಯರ್ಥಿ ಆಶೋಕ್ ಖೇಣಿಗೂ ಐಟಿ ಶಾಕ್
ಇನ್ನು ಬೀದರ್ ಕ್ಷೇತ್ರದ ಹಾಲಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ, ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದ ಮೇರೆಗೆ ಬೀದರ್ ನ ರಾಂಪುರದಲ್ಲಿರುವ ಅಶೋಕ್ ಖೇಣಿ ನಿವಾಸದ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Comments are closed.