ಕರ್ನಾಟಕ

ರಾಶಿ ರಾಶಿ ಚುನಾವಣಾ ಗುರುತಿನ ಚೀಟಿ ಪತ್ತೆ ಆರೋಪ: ಮೇ 28ಕ್ಕೆ ರಾಜರಾಜೇಶ್ವರಿ ನಗರ ಚುನಾವಣೆ

Pinterest LinkedIn Tumblr


ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ಚುನಾವಣಾ ಗುರುತಿನ ಚೀಟಿ ಪತ್ತೆಯಾಗಿದ್ದ ಪ್ರಕರಣದ ಪರಿಣಾಮ ನಾಳೆ ನಡೆಯಬೇಕಿದ್ದ ಕ್ಷೇತ್ರದ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ರದ್ದು ಪಡಿಸಿದೆ.

ಕ್ಷೇತ್ರ ಚುನಾವಣೆ ಮೇ 28ಕ್ಕೆ ನಡೆದು, ಫಲಿತಾಂಶ ಮೇ 31ರಂದು ಹೊರಬೀಳಲಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್​ ಕುಮಾರ್ ಶುಕ್ರವಾರ ಸಂಜೆ ತಿಳಿಸಿದ್ದಾರೆ.

ಹೊಸದಾಗಿ ಈ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತೆ. ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಆರೋಪ ಸಾಬೀತಾದ್ರೆ ಅಕ್ರಮ ಎಸಗಿದ ಅಭ್ಯರ್ಥಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಿ.ಎನ್​.ವಿಜಯಕುಮಾರ್ ಅಕಾಲಿಕ ನಿಧನರಾದ ಜಯನಗರ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರ ಹೊರತುಪಡಿಸಿ ಉಳಿದ 222 ಕ್ಷೇತ್ರಗಳಲ್ಲಿ ನಾಳೆ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ ಚುನಾವಣೆ ನಡೆಯಲಿದೆ ಎಂದರು.

ಗುರುತಿನ ಚೀಟಿ ಪತ್ತೆ ಪ್ರಕರಣಕ್ಕೆ ಕುರಿತಂತೆ ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಿಸಲು ಬೆಂಗಳೂರಿನ 24ನೇ ಎಪಿಎಂಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು. ಈಗಾಗಲೇ ಮುನಿರತ್ನ ವಿರುದ್ಧ ಮೂರು ಎಫ್​ಐಆರ್​ಗಳು ದಾಖಲಾಗಿವೆ.

Comments are closed.