ಕರ್ನಾಟಕ

ಕಾಂಗ್ರೆಸ್’ನ ಸಿದ್ದರಾಮಯ್ಯ ಅಥವಾ ಬಿಜೆಪಿಯ ಯಡಿಯೂರಪ್ಪ ಇಬ್ಬರೂ ಕರ್ನಾಟಕದ ಮುಖ್ಯಮಂತ್ರಿ ಆಗುವುದಿಲ್ಲ: ಜೆಡಿಎಸ್

Pinterest LinkedIn Tumblr

ನವದೆಹಲಿ: ಕಾಂಗ್ರೆಸ್’ನ ಸಿದ್ದರಾಮಯ್ಯ ಅಥವಾ ಬಿಜೆಪಿಯ ಯಡಿಯೂರಪ್ಪ ಇಬ್ಬರೂ ಕೂಡ ಕರ್ನಾಟಕದ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಅಲಿ ಹೇಳಿದ್ದಾರೆ,

ದೆಹಲಿಯಲ್ಲಿ ಸುದ್ದಿ ಸಂಸ್ಧೆಯೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಅಲಿ, ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಮುಂದಿನ ಸರ್ಕಾರವನ್ನು ತಾವೇ ರಚಿಸುವುದಾಗಿ ಹೇಳುತ್ತಿದ್ದಾರೆ, ನಾಳೆಯ ಫಲಿತಾಂಶದ ನಂತರ ಅವರಿಗೆ ತಮ್ಮ ತಪ್ಪಿನ ಅರಿವಾಗುತ್ತದೆ ಎಂದು ಹೇಳಿದ್ದಾರೆ.

ಮೇ 1ರ ರಂದು ಫಲಿತಾಂಶ ಪ್ರಕಟಗೊಂಡ ನಂತರ ತಾವು ನೀಡಿದ್ದ ಹೇಳಿಕೆಗಳನ್ನು ವಾಪಸ್ ತೆಗೆದುಕೊಳ್ಳಲಿದ್ದಾರೆ, ಕರ್ನಾಟಕ ಜನತೆ ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಬೇಕೆಂದು ಬಯಸಿದ್ದಾರೆ ಎಂದು ತಿಳಿಸಿದ್ದಾರೆ,

ಕುಮಾರ ಸ್ವಾಮಿ ಜೆಡಿಎಸ್ ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ, ಮೇ 12 ರಂದು ರಾಜ್ಯ ವಿಧಾನ ಸಭೆಗೆ ಚುನಾವಣೆ ನಡೆದಿದ್ದು ಮೇ 15ರಂದು ಫಲಿತಾಂಶ ಹೊರಬೀಳಲಿದೆ.

ಎಕ್ಸಿಟ್ ಪೋಲ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದ್ದು, ಜೆಡಿಎಸ್ ಕಿಂಗ್ ಮೇಕರ್ ಆಗಲಿಗೆ ಎಂದು ಹೇಳಲಾಗಿತ್ತು.

Comments are closed.